ದೇಶ

ವಿಜಯದಶಮಿ ಪ್ರಯುಕ್ತ ರಾಣನ ಪ್ರತಿಕೃತಿ ದಹಿಸಲಿರುವ ಮೋದಿ

ದೇಶ(ನವದೆಹಲಿ)ಸೆ.30:- ಇಂದು ದೇಶಾದ್ಯಂತ ವಿಜಯದಶಮಿಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾವಣನ ಪ್ರತಿಕೃತಿಯನ್ನು ದಹಿಸಲಿದ್ದಾರೆ.

ಕಲೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಲಕ್ನೋದಲ್ಲಿ ದಸರಾವನ್ನು ಆಚರಿಸಿದ್ದರು. ಇಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೂ ಸಹ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳು ನಡೆದಿದ್ದು, ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಭಾರೀ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ತ್ವೀಟರ್ ಮೂಲಕ ದೇಶದ ಜನತೆಗೆ ವಿಜಯದಶಮಿಯ ಶುಭಾಶಯಗಳನ್ನು ತಿಳಿಸಿದ್ದಾರೆ. (ಎಸ್.ಎಚ್)

Leave a Reply

comments

Related Articles

error: