ಮೈಸೂರು

ಮಕ್ಕಳ ಮಾರಾಟ ಜಾಲ ಪ್ರಕರಣ : ಮತ್ತೆ ಮೂವರ ಬಂಧನ

ಮೈಸೂರಿನಲ್ಲಿ ಮಕ್ಕಳ ಮಾರಾಟ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಮ್ಮ ಕಾರ್ಯಾಚರಣೆ ಮುಂದುವರಿಸಿದ್ದು ಶುಕ್ರವಾರ ಮಧ್ಯಾಹ್ನ ಮತ್ತೆ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನರ್ಸ್ ಹಾಗೂ ಆಕೆಯ ಜೊತೆಯಿದ್ದ ಮಗುವನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು, ಮಂಡಿಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಕ್ಕಳ ಮಾರಾಟ ಜಾಲದಲ್ಲಿ ಯಾರೋ ನುರಿತವರೇ ತೊಡಗಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಸಿಸಿಬಿ ಪೊಲೀಸರು ಮತ್ತು ಮಂಡಿಮೊಹಲ್ಲಾ ಠಾಣೆಯ ಪೊಲೀಸರು ಪ್ರಕರಣ ಭೇದಿಸಲು ಜಂಟಿ ಕಾರ್ಯಾಚರಣೆಗಿಳಿದಿದ್ದಾರೆ.

ನಂಜನಗೂಡಿನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಲಾ ಕೃಷ್ಣಮೂರ್ತಿ ಮೂವರನ್ನು ಬಂಧಿಸಿದ್ದು, ಒಂದೂವರೆ ತಿಂಗಳ ಹಿಂದೆ ತಾಲೂಕಿನಾದ್ಯಂತ ಎಷ್ಟು ಮಂದಿ ಮಕ್ಕಳು ನಾಪತ್ತೆಯಾಗಿದ್ದಾರೆ ಎನ್ನುವ ವರದಿಯನ್ನು ಪರಿಶೀಲಿಸಿದ್ದಾರೆ. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸುತ್ತಿದ್ದಾರೆ.

Leave a Reply

comments

Related Articles

error: