ಮೈಸೂರು

ಜನಾಂದೋಲನಗಳ ಮಹಾಮೈತ್ರಿ ಘೋಷಣಾ ಸಮಾವೇಶ ನ.6ರಂದು

ಜನಹಿತಕ್ಕಾಗಿ ಹೋರಾಡುತ್ತಿರುವ ಕರ್ನಾಟಕದ ವಿವಿಧ ಜನಾಂದೋಲನಗಳು ಜೊತೆಗೂಡಿ ನ.6 ರಂದು ಬೆಳಗ್ಗೆ 10.30 ಕ್ಕೆ ಮೈಸೂರಿನ ಮಹಾರಾಜ ಕಾಲೇಜಿನ ಆವರಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ಜನಾಂದೋಲನಗಳ ಮಹಾಮೈತ್ರಿ ಘೋಷಣಾ ಸಮಾವೇಶ ನಡೆಸಲಿದ್ದು, ಈ ಸಮಾರಂಭದಲ್ಲಿ ಜನಾಂದೋಲನಗಳ ಮಹಾಮೈತ್ರಿಯನ್ನು ಘೋಷಿಸಲಾಗುತ್ತದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷೆ ಸುಮನಾ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜನರ ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಮಾನ ಹಕ್ಕುಗಳಗಾಗಿ ಸಮಗ್ರ ಹೋರಾಟ ನಡೆಸುವ ಸಲುವಾಗಿ ಈ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ. ಒಟ್ಟು 28 ಸಂಘಟನೆಗಳು ಭಾಗವಹಿಸುತ್ತವೆ ಎಂದು ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜನಾಂದೋಲನ ಮಹಾಮೈತ್ರಿಯ ಸದಸ್ಯರಾದ ಚಂದ್ರಶೇಖರ್ ಮೇಟಿ, ಕರುಣಾಕರ್, ಅಭಿರುಚಿ ಗಣೇಶ್, ಹೋಸೂರು ಕುಮಾರ್, ಶಂಭುಲಿಂಗಸ್ವಾಮಿ ಹಾಜರಿದ್ದರು.

Leave a Reply

comments

Related Articles

error: