ಮೈಸೂರು

ರಿಲ್ಯಾಕ್ಸ್ ಮೂಡ್ ನಲ್ಲಿ ಗಜಪಡೆ : ಬಿಕೋ ಎನ್ನುತ್ತಿದೆ ಅರಮನೆ ಆವರಣ

ಮೈಸೂರು,ಅ.1:-ದಸರಾ ಹಿನ್ನೆಲೆಯಲ್ಲಿ ಹತ್ತು ದಿನಗಳ ಕಾಲ ಇಡೀ ವಿಶ್ವದ ಗಮನ ಸೆಳೆದಿದ್ದ ಮೈಸೂರು ಅರಮನೆಯ ಆವರಣದಲ್ಲಿಂದು ಬಿಕೋ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜಂಬೂಸವಾರಿ ಮೆರವಣಿಗೆ ಮರುದಿನ ಅರಮನೆ ಆವರಣದಲ್ಲಿ ಸ್ವಚ್ಚತಾ ಕಾರ್ಯ ಆರಂಭವಾಗಿತ್ತು. ಜಂಬೂ ಸವಾರಿ ಮೆರವಣಿಗೆಯಲ್ಲಿ ಸುಲಲಿತವಾಗಿ ಚಿನ್ನದ ಅಂಬಾರಿ ಹೊತ್ತು ಸಾಗಿ ರಂಗು ತಂದ ಅರ್ಜುನ ನೇತೃತ್ವದ ಗಜಪಡೆ ಇಂದು ಫುಲ್ ರಿಲ್ಯಾಕ್ಸ್ ಮೂಡ್ ನಲ್ಲಿವೆ. ಗಜಪಡೆಗಳನ್ನು ನೀರಿನಿಂದ ಸ್ವಚ್ಛಗೊಳಿಸಲಾಗುತ್ತಿತ್ತು. ಗಜಪಡೆಯ ಮಾವುತರು, ಕಾವಾಡಿಗಳು ತಮ್ಮ ತಮ್ಮ ಸ್ವಸ್ಥಾನಗಳಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: