ಮೈಸೂರು

ಪತಿ-ಪತ್ನಿ ನೇಣಿಗೆ ಶರಣು

ಮೈಸೂರು,ಅ.1:- ಗಂಡ ಹೆಂಡತಿಯಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಬಸವಟ್ಟಿಗೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಮೃತರನ್ನು ಮೂಲತಃ ಚಾಮರಾಜನಗರ ಜಿಲ್ಲೆಯ ನಲ್ಲೂರು ಗ್ರಾಮದ ರಾಘವ (30 ) ಹಾಗೂ ಶ್ವೇತ (22)ಎಂದು ಗುರುತಿಸಲಾಗಿದೆ. ದಂಪತಿಗಳು  ಬಸವಟ್ಟಿಗೆಯಲ್ಲಿ ಬಾಡಿಗೆಗೆ ಮನೆ ಪಡೆದು ಕೊಂಡಿದ್ದರು.   ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಕೌಲಂದೆ ಪೊಲೀಸ್ ರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: