ಕರ್ನಾಟಕಪ್ರಮುಖ ಸುದ್ದಿ

ಆಸ್ಪತ್ರೆಯಿಂದ ಮಾಜಿ ಸಿಎಂ ಎಚ್‍ಡಿಕೆ ಡಿಸ್ಚಾರ್ಜ್

ಬೆಂಗಳೂರು, ಅ.2: ಹೃದಯದ ಕವಾಟ ಬದಲಿಸುವ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿ ಅವರನ್ನು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಮಾಡಲಾಗಿದೆ.

ರಾಜಧಾನಿ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಅವರಿಗೆ ಕಳೆದ ಸೆ.23ರಂದು ಹೃದಯ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. 25 ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿರುವ ವೈದ್ಯರು ಕಾಲಕಾಲಕ್ಕೆ ಸರಿಯಾಗಿ ಆಹಾರ ಸೇವನೆ ಮಾಡುವಂತೆ ಸಲಹೆ ಮಾಡಿದ್ದಾರೆ.

ಈ ವೇಳೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ನಿಮ್ಮ ಪ್ರೀತಿ, ಅಭಿಮಾನ ನಿಮ್ಮ ಹೃದಯದಲ್ಲಿರಲಿ. ನನ್ನ ಆರೋಗ್ಯ ಚೇತರಿಕೆ ಕಾಣುತ್ತಿದೆ. ನನಗೆ ಒಂದು ತಿಂಗಳ ಕಾಲ ವಿಶ್ರಾಂತಿ ಕೊಡಿ ಎಂದು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಲ್ಲಿ ಎಚ್‍ಡಿಕೆ ಮನವಿ ಮಾಡಿದ್ದಾರೆ.

(ಎನ್.ಬಿ)

Leave a Reply

comments

Related Articles

error: