ಪ್ರಮುಖ ಸುದ್ದಿ

ಸೇನಾ ಕ್ಯಾಂಪ್‌ಗಳ ಮೇಲೆ ಉಗ್ರರ ದಾಳಿ: ಇಬ್ಬರು ಉಗ್ರರ ಹತ್ಯೆ

ಪ್ರಮುಖ ಸುದ್ದಿ, ಶ್ರೀನಗರ, ಅ.೩: ಬಿಎಸ್‌ಎಫ್ ಯೋಧರ ಕ್ಯಾಂಪ್‌ಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ಮಾಡಿದ್ದು, ಮೂವರು ಯೋಧರು ಗಾಯಗೊಂಡಿರುವ ಘಟನೆ ಶ್ರೀನಗರ ವಿಮಾನ ನಿಲ್ದಾಣದ ಸಮೀಪವಿರುವ ಬಿಎಸ್‌ಎಫ್ ಕ್ಯಾಂಪ್‌ನಲ್ಲಿ ನಡೆದಿದೆ.
ವಿಮಾನ ನಿಲ್ದಾಣ ಮುಖ್ಯ ದ್ವಾರದ ಬಳಿಯಿರುವ ಬಿಎಸ್‌ಎಫ್ ೧೮೨ ಬೆಟಾಲಿಯನ್ ಪಡೆಯನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿದೆ. ಬೆಳಗ್ಗೆ ೪ ಗಂಟೆ ಸುಮಾರಿಗೆ ಉಗ್ರರು ಆತ್ಮಹುತಿ ದಾಳಿ ನಡೆಸಿದ್ದಾರೆ. ದಾಳಿ ನಡೆಸುತ್ತಿದ್ದಂತೆಯೇ ಕಾರ್ಯಾಚರಣೆಗಿಳಿದ ಸೇನಾಪಡೆಗಳು ಇಬ್ಬರು ಉಗ್ರರನ್ನು ಸದೆ ಬಡಿದಿದ್ದಾರೆ. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಶಂಕೆಯಿದ್ದು ಶೋಧ ಕಾರ್ಯ ಮುಂದುವರಿದಿದೆ. ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಗಾಯಗೊಂಡಿರುವ ಯೋಧರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಗ್ರರ ವಿರುದ್ಧದ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಉದ್ಯೋಗಿಗಳು, ಪ್ರಯಾಣಿಕರು, ವಾಹನಗಳಿಗೆ ವಿಮಾನ ನಿಲ್ದಾಣದಲ್ಲಿ ಅನುಮತಿ ನೀಡುತ್ತಿಲ್ಲ. ಎಲ್ಲಾ ವಿಮಾನ ಸೇವೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಉಗ್ರರು ದಾಳಿ ನಡೆಸಿರುವ ವಿಮಾನ ನಿಲ್ದಾಣದ ಹತ್ತಿರದಲ್ಲಿಯೇ ಶಾಲೆ ಕೂಡ ಇದ್ದು, ಉಗ್ರರ ದಾಳಿ ಹಿನ್ನಲೆಯಲ್ಲಿ ಶಾಲೆಯನ್ನು ಮುಚ್ಚಿಸಲಾಗಿದೆ. ಪ್ರಸ್ತುತ ಉಗ್ರರು ದಾಳಿ ನಡೆಸಿರುವ ವಿಮಾನ ನಿಲ್ದಾಣ ಶ್ರೀನಗರದ ಸುತ್ತಮುತ್ತಲಿನ ಪ್ರಮುಖ ನಾಗರಿಕ ವಿಮಾನ ನಿಲ್ದಾಣವಾಗಿದ್ದು, ಸೇನಾ ಪಡೆ ಹಾಗೂ ವಿಐಪಿಗಳು ಈ ವಿಮಾನ ನಿಲ್ದಾಣಗಳನ್ನು ಬಳಕೆ ಮಾಡುತ್ತಿದ್ದರು. ನಿಲ್ದಾಣದ ಹತ್ತಿರದಲ್ಲಿಯೇ ಬಿಎಸ್‌ಎಫ್ ಹಾಗೂ ಸಿಆರ್‌ಪಿಎಫ್ ಪಡೆಗಳ ಹಲವು ತರಬೇತಿ ಕೇಂದ್ರಗಳಿವೆ. ಉಗ್ರರನ್ನು ಸದೆ ಬಡಿಯುವ ಕಾರ್ಯಾಚರಣೆ ಮುಂದುವರಿದಿದೆ. (ವರದಿ ಬಿ.ಎಂ)

 

Leave a Reply

comments

Related Articles

error: