ಕರ್ನಾಟಕ

ಶಿಕ್ಷಕರ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ

ಬೆಂಗಳೂರು, ಅ.3: 2017-18 ನೇ ಸಾಲಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಜಿಲ್ಲಾ, ವಿಶ್ವವಿದ್ಯಾಲಯ ಮಟ್ಟದಲ್ಲಿ ಅತಿ ಹೆಚ್ಚು ಅಂಕ ಪಡೆದ ಶಿಕ್ಷಕರುಗಳ, ನಿವೃತ್ತ ಶಿಕ್ಷಕರ ಮಕ್ಕಳಿಗೆ “ಪ್ರತಿಭಾವಂತ ವಿದ್ಯಾರ್ಥಿ ವೇತನ” ಮಂಜೂರು ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

2016-17ನೇ ಮಾರ್ಚ್, ಏಪ್ರಿಲ್ 2017ರಲ್ಲಿ ನಡೆದ ಎಸ್.ಎಸ್.ಎಲ್.ಸಿ, ದ್ವಿತೀಯ ಪಿ.ಯು.ಸಿ. ಹಾಗೂ ಪದವಿ ಅಂತಿಮ ವರ್ಷ (ಬಿ.ಎ, ಬಿ.ಎಸ್‍ಸಿ, ಬಿಕಾಂ, ಬಿ.ಇಡಿ, ಬಿಸಿಎ, ಬಿಬಿಎಂ, ಬಿ.ಹೆಚ್‍ಎಂ, ಎಲ್‍ಎಲ್‍ಬಿ ಅಂತಿಮ ಪೂರ್ವ (ಬಿಎ 6ನೇ ಸೆಮಿಸ್ಟರ್, ಎಂಬಿಬಿಸ್ ಅಂತಿಮ 2ನೇ ಫೇಸ್) ಪ್ರಥಮ ವರ್ಷದ ಸ್ನಾತಕೋತ್ತರ ಪರೀಕ್ಷೆ (1ನೇ ಮತ್ತು 2ನೇ ಸಮಿಸ್ಟರ್ ಎಂ.ಎ, ಎಂ.ಎಸ್ಸಿ, ಎಂ.ಕಾಂ, ಎಂ.ಎಡ್) ಪರೀಕ್ಷೆಗಳಲ್ಲಿ ಕನಿಷ್ಠ ಶೇ. 60 ರಷ್ಟು ಅಂಕ ಪಡೆದ ವಿಧ್ಯಾರ್ಥಿಗಳು ನಿಗದಿತ ಅರ್ಜಿಗಳನ್ನು ದೃಢೀಕರಿಸಿದ ಅಂಕಪಟ್ಟಿಯೊಂದಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಮತ್ತು ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಶಿಕ್ಷಕರ ಸದನ, ಕೆ.ಜಿ. ರಸ್ತೆ, ಬೆಂಗಳೂರು – ಇಲ್ಲಿಗೆ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಪರಿಶೀಲಿಸಿ ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಾಗುವುದು. ಅರ್ಜಿ ನಮೂನೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಂತರ್ಜಾಲ ತಾಣ  www.schooleducation.kar.nic.in ಇಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ. ಭರ್ತಿಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 31. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

(ಎನ್.ಬಿ)

Leave a Reply

comments

Related Articles

error: