ಪ್ರಮುಖ ಸುದ್ದಿಮೈಸೂರು

ಟಿಪ್ಪು ಜಯಂತಿ ಆಚರಣೆ ಹಿನ್ನೆಲೆ: 36 ರೌಡಿ ಶೀಟರ್‍ಗಳ ವಿರುದ್ಧ ಪ್ರಕರಣ

ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ 36 ಮಂದಿ ರೌಡಿ ಶೀಟರ್‍ಗಳ ವಿರುದ್ಧ ಭದ್ರತಾ ಪ್ರಕರಣ ದಾಖಲಿಸಲಾಗಿದೆ.

36 ಮಂದಿ ರೌಡಿ ಶೀಟರ್, ಗೂಂಡಾ ಮತ್ತು ಕೋಮುವಾದಿ ಗೂಂಡಾಗಳ ವಿರುದ್ಧ ಭದ್ರತಾ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇನ್ನೂ ಕೆಲವರ ವಿರುದ್ಧ ಇದೇ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಎ. ಸುಬ್ರಹ್ಮಣ್ಯೇಶ್ವರ ರಾವ್ ತಿಳಿಸಿದ್ದಾರೆ.

ನ.10ರಂದು ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಣೆ ಮಾಡಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಗೊಂದಲಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ. ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿದ್ದಾರೆ.

ಮುಂಜಾಗ್ರತಾ ಕ್ರಮ: ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಚೆಕ್‍ಪೋಸ್ಟ್’ಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ ನಗರಕ್ಕೆ ಪ್ರವೇಶಿಸುವ ಮತ್ತು ಹೊರ ಹೋಗುವವರ ಮೇಲೆ ನಿಗಾ ವಹಿಸಲಾಗುತ್ತಿದೆ. ಸಶಸ್ತ್ರ ಮೀಸಲು ಪಡೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗುತ್ತಿದೆ.

Leave a Reply

comments

Related Articles

error: