ಮೈಸೂರು

ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾಗಿ ಬಿ.ಸಿದ್ದರಾಜು ಅಧಿಕಾರ ಸ್ವೀಕಾರ

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ‍್ಯಕ್ಷರಾಗಿ ಶುಕ್ರವಾರ ಮಾಜಿ ಉಪಮೇಯರ್ ಸಿದ್ದರಾಜು ಅವರು ಅಧಿಕಾರ ಸ್ವೀಕರಿಸಿದರು.

ದಸರಾ ವಸ್ತು ಪ್ರದರ್ಶನ ಆವರಣದಲ್ಲಿರುವ ಅಧ‍್ಯಕ್ಷರ ಕಚೇರಿಯಲ್ಲಿ ವಸ್ತು ಪ್ರದರ್ಶನದ ಪ್ರಾಧಿಕಾರದ ಸಿಇಓ ಶಶಿಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ ದಸರಾ ವಸ್ತು ಪ್ರದರ್ಶನವು ಈಗಾಗಲೇ ಆರಂಭವಾಗಿದೆ. ಡಿಸೆಂಬರ್ ಅಂತ್ಯದವರೆಗೂ ವಸ್ತು ಪ್ರದರ್ಶನ ನಡೆಯಲಿದೆ. ಈ ಅವಧಿಯಲ್ಲಿ ಜನರಿಗೆ ಮನರಂಜನೆ ನೀಡುವ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಮುಂದಿನ ದಿನಗಳಲ್ಲಿ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ವಿವಿಧ ವಸ್ತು ಪ್ರದರ್ಶನ ನಡೆಸುವ ಮೂಲಕ ವರ್ಷವಿಡೀ ಕಾರ್ಯಕ್ರಮ ನಡೆಸುವ ಗುರಿ ಹೊಂದಲಾಗಿದೆ ಎಂದರು. ನನ್ನ ಅಧಿಕಾರಾವಧಿಯಲ್ಲಿ ಅನೇಕ ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರುವ ಉದ್ದೇಶ ಹೊಂದಿದ್ದೇನೆ. ನನಗೆ ಜವಾಬ್ದಾರಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸೇರಿದಂತೆ ಸಹಕರಿಸಿದ ಎಲ್ಲರಿಗೂ ಅಭನಂದನೆ ಸಲ್ಲಿಸುತ್ತೇನೆ ” ಎಂದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಜೆ. ಜಗದೀಶ್, ಸುನೀಲ್, ನಗರ ಕಾಂಗ್ರೆಸ್ ಅಧ್ಯಕ್ಷ ಟಿ.ಎಸ್. ರವಿಶಂಕರ್, ಕೆ.ಆರ್. ಬ್ಯಾಂಕ್ ಉಪಾಧ್ಯಕ್ಷ ನವೀನ್ ಕುಮಾರ್, ಎಸ್.ವಿ. ಅಂಡ್ ಸನ್ಸ್ ‍ನ ವೆಂಕಟೇಶ್, ಮಾಜಿ ಉಪಮೇಯರ್ ಆರ್. ಪುಷ್ಪವಲ್ಲಿ, ನಗರ ಮಹಿಳಾ ಕಾಂಗ್ರೆಸ್  ಉಪಾಧ್ಯಕ್ಷೆ ರಾಣಿಪ್ರಭಾ, ಮುಖಂಡ ರಾಜು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Leave a Reply

comments

Related Articles

error: