
ಕರ್ನಾಟಕ
ಅ.4 ರಂದು ಮಂಡ್ಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಮಂಡ್ಯ (ಅ.10): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಡ್ಯ ಹಾಗೂ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ದುಡಿಯುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಮಂಡ್ಯ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ವಸತಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಕೃಷ್ಣಪ್ಪ ಅವರು ನಡೆಸಿಕೊಡಲಿದ್ದು, ಮಂಡ್ಯ ವಿಧಾನಸಭೆ ಕ್ಷೇತ್ರದ ಶಾಸಕರಾದ ಡಾ.ಎಂ.ಹೆಚ್.ಅಂಬರೀಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
(ಎನ್.ಬಿ)