ಸುದ್ದಿ ಸಂಕ್ಷಿಪ್ತ

ವನ್ಯಜೀವಿ ಸಪ್ತಾಹ ಆಚರಣೆ ಪ್ರಯುಕ್ತ ಪ್ರಬಂಧ ಸ್ಪರ್ಧೆ

ಮಡಿಕೇರಿ ಅ.3 : ಅರಣ್ಯ ಇಲಾಖೆ, ಕೊಡಗು ವೃತ್ತದ ವತಿಯಿಂದ ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕುಗಳಲ್ಲಿ 63ನೇ ವನ್ಯಜೀವಿ ಸಪ್ತಾಹ ಆಚರಣೆ ಪ್ರಯುಕ್ತ ಅ.7 ರಂದು ಪ್ರಬಂಧ ಸ್ಪರ್ಧೆಯನ್ನು ಪ್ರೌಢಶಾಲೆ, ಪಿ.ಯು.ಸಿ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ, ಚಿತ್ರಕಲೆ ಸ್ಪರ್ಧೆಯನ್ನು ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಅ.8 ರಂದು ರಸಪ್ರಶ್ನೆ ಸ್ಪರ್ದೆ, ಪ್ರೌಢಶಾಲೆ, ಪಿ.ಯು.ಸಿ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದೆ.

ಮಡಿಕೇರಿ ತಾಲೂಕಿನ ವಿದ್ಯಾರ್ಥಿಗಳಿಗೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ರಾಜಾಸೀಟ್‍ನಲ್ಲಿ ಹಾಗೂ ಸೋಮವಾರಪೇಟೆ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ನಿಸರ್ಗಧಾಮ ಮತ್ತು ಕುಶಾಲನಗರದಲ್ಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು (ದೂರವಾಣಿ ಸಂಖ್ಯೆ:9448647864), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೀಮಾ.ಪಿ.ಎ (ದೂರವಾಣಿ ಸಂಖ್ಯೆ:9900431273) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: