ಸುದ್ದಿ ಸಂಕ್ಷಿಪ್ತ

ಅ.5: ಮಹರ್ಷಿ ವಾಲ್ಮೀಕಿ ಜಯಂತಿ

ಮಡಿಕೇರಿ ಅ.3 :-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಅ.5 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿ.ಪಂ. ಅಧ್ಯಕ್ಷರಾದ ಬಿ.ಎ.ಹರೀಶ್, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ರೇಷ್ಮೆ ಮಹಾಮಂಡಳಿ ನಿಗಮ ನಿಯಮಿತದ ಅಧ್ಯಕ್ಷರಾದ ಟಿ.ಪಿ.ರಮೇಶ್, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಉಆಧ್ಯಕ್ಷರಾದ ಪದ್ಮಿನಿ ಪೊನ್ನಪ್ಪ, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ.ಕೆ.ವಿಜುಸುಬ್ರಮಣಿ, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ಹುಣಸೂರು ಸರ್ಕಾರಿ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಬಿ.ನಂಜುಂಡಸ್ವಾಮಿ ಇತರರು ಪಾಲ್ಗೊಳ್ಳಲಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: