
ಮೈಸೂರು
ಅ.5 ರಂದು ಕಲಾಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ
ಮೈಸೂರು, ಅ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮೈಸೂರು ಮಹಾನಗರ ಪಾಲಿಕೆ, ನಗಾರಾಭಿವೃದ್ಧಿ ಪ್ರಾಧಿಕಾರ ಮತ್ತು ಮೈಸೂರು ತಾಲ್ಲೂಕು ಹಾಗೂ ನಗರ ನಾಯಕ ಜನಾಂಗದ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಕ್ಟೋಬರ್ 5 ರಂದು ಮಧ್ನಾಹ್ನ 12 ಗಂಟೆಗೆ ಮೈಸೂರಿನ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವಾಸು ಅವರು ಅಧ್ಯಕ್ಷತೆ ವಹಿಸುವರು. ಮೈಸೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ.ಸುತ್ತೂರು ಎಸ್. ಮಾಲಿನಿ ಅವರು ಮುಖ್ಯ ಭಾಷಣಕರಾಗಿ ಭಾಗವಹಿಸಲಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಮೈಸೂರು ಮಹಾನಗರ ಪಾಲಿಕೆ ಉಪ ಮಹಾಪೌರರಾದ ಎಂ.ಜೆ. ರವಿಕುಮಾರ್ ಅವರು ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಅಡ್ಡಪಲ್ಲಕಿ ಮೆರವಣಿಗೆಗೆ ಚಾಲನೆ ಹಾಗೂ ನಂದಿ ಕಂಭ ಪೂಜೆ ನೆರವೇರಿಸುವರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ತನ್ವೀರ್ ಸೇಠ್, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಎಂ.ಜೆ. ರವಿಕುಮಾರ್, ಉಪಸಭಾಪತಿ ಮರಿತಿಬ್ಬೇಗೌಡರು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯೀಮಾ ಸುಲ್ತಾನ ನಜೀರ್ ಅಹಮದ್, ಲೋಕಸಭಾ ಸದಸ್ಯ ಪ್ರತಾಪ ಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್. ಪುಟ್ಟರಾಜು, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ಹೆಚ್.ಪಿ. ಮಂಜುನಾಥ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಸಕ ಕೆ. ವೆಂಕಟೇಶ್, ರೇಷ್ಮೆ ಉದ್ದಮಗಳ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಕೆ. ಸೋಮಶೇಖರ್, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಚಿಕ್ಕಮಾದು, ಸಾ.ರಾ.ಮಹೇಶ್, ಕಳಲೆ ಎನ್.ಕೇಶವಮೂರ್ತಿ, ವಿಧಾನ ಪರಿಷತ್ ಸದಸ್ಯ ಎಸ್.ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಕೆ.ವಿ. ನಾರಾಯಣ ಸ್ವಾಮಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಿ.ಧ್ರುವಕುಮಾರ್, ಕಾವೇರಿ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ನಂಜಪ್ಪ, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಹೆಚ್.ಎ. ವೆಂಕಟೇಶ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಜು, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಲ್ಲಿಗೆ ವೀರೇಶ್, ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂದಕುಮಾರ್, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ವಿ. ಸೀತಾರಾಮು, ಮೈಸೂರು ಮಹಾನಗರ ಪಾಲಿಕೆ ಉಪ ಮಹಾಪೌರರಾದ ರತ್ನ ಲಕ್ಷ್ಮಣ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಜಿ. ನಟರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಉಪಾಧ್ಯಕ್ಷ ಎನ್.ಜಿ. ಮಂಜು ಅವರುಗಳು ಭಾಗವಹಿಸುವರು.
ಅಂದು ಬೆಳಿಗ್ಗೆ 10 ಗಂಟೆಗೆ ಕಲಾಮಂದಿರದಲ್ಲಿ ರವಿರಾಜ್ ಮತ್ತು ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಂಜೆ 6 ಗಂಟೆಗೆ ಕಲಾಮಂದಿರದಲ್ಲಿ ರಂಗಾನಂದ ಕಲಾಸಂಘದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
(ಎನ್.ಬಿ)