ಮೈಸೂರು

ಮುಂದಿನ ಪೀಳಿಗೆ ಪ್ರಾಣಿ-ಪಕ್ಷಿಗಳನ್ನು ಚಿತ್ರದಲ್ಲಿ ನೋಡುವ ಸ್ಥಿತಿ ನಿರ್ಮಾಣವಾಗಬಾರದು : ಸಿ.ರವಿಶಂಕರ್

ಮೈಸೂರು,ಅ.4:- ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಕಲಾಕೂಟ ವತಿಯಿಂದ ವಿಶ್ವಪ್ರಾಣಿ ದಿನ ಮತ್ತು ವನ್ಯಜೀವಿ ಸಪ್ತಾಹದ ಅಂಗವಾಗಿ ಯು.ಜಿ.ಮೋಹನ್ ಕುಮಾರ್ ಆರಾಧ್ಯ ರಚಿಸಿರುವ ಪ್ರಾಣಿಗಳ ಅಳಿವು ಉಳಿವು ಚಿತ್ರಕಲಾ ಪ್ರದರ್ಶನಕ್ಕೆ ಬುಧವಾರ ಚಾಲನೆ ನೀಡಲಾಯಿತು.

ಮೈಸೂರಿನ ಕಲಾಮಂದಿರದ ಸುಚಿತ್ರ ಆರ್ಟ್ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾದ ಚಿತ್ರಕಲಾ ಪ್ರದರ್ಶನಕ್ಕೆ ಜಯಚಾಮರಾಜೇಂದ್ರ ಮೃಗಾಲಯ ಕಾರ್ಯನಿರ್ವಾಹಕ ನಿರ್ದೇಶಕ ಉಪಸಂರಕ್ಷಣಾಧಿಕಾರಿ ಸಿ.ರವಿಶಂಕರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರಾಣಿ-ಪಕ್ಷಿಗಳನ್ನು ಉಳಿಸಬೇಕು. ಹಲವು ಪ್ರಾಣಿ ಪಕ್ಷಿಗಳು ವಿನಾಶದ ಅಂಚಿಗೆ ತಲುಪುತ್ತಿವೆ. ಮುಂದಿನ ಪೀಳಿಗೆ ಕೇವಲ ಚಿತ್ರಗಳಲ್ಲಿ ನೋಡಿ ಅವುಗಳ ಕುರಿತು ತಿಳಿಯುವ ಸ್ಥಿತಿ ನಿರ್ಮಾಣವಾಗಬಾರದು . ಗಿಡಮರಗಳನ್ನು ಬೆಳೆಸಬೇಕು. ಗಿಡಮರಗಳಲ್ಲಿ ಪಕ್ಷಿಗಳು ಬಂದು ನೆಲೆಸುವುದಕ್ಕೆ ಸಹಾಯವಾಗಲಿದ್ದು ಪಕ್ಷಿ ಸಂಕುಲ ಉಳಿಯಲಿದೆ ಎಂದರು. ಯುವಜನತೆಗೆ ಈ ಕುರಿತು ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ವೈ.ಡಿ.ರಾಜಣ್ಣ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ನ ಉಪಾಧ್ಯಕ್ಷ ಪ್ರೊ.ಎಸ್.ಎಂ.ಗುರುನಂಜಯ್ಯ, ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ .ಚಂದ್ರಶೇಖರ್, ಕಲಾವಿದ ಯು.ಜಿ.ಮೋಹನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: