ದೇಶಪ್ರಮುಖ ಸುದ್ದಿ

ದೆಹಲಿಯಲ್ಲಿ ಹೆಚ್ಚಿದ ವಾಯುಮಾಲಿನ್ಯ: ಶಾಲೆಗಳಿಗೆ ರಜೆ ಘೋಷಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶನಿವಾರವೂ ದಟ್ಟ ಹೊಗೆ ಮುಂದುವರಿದ ಹಿನ್ನೆಲೆಯಲ್ಲಿ 1800 ಕಾರ್ಪೊರೇಷನ್‍ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ವಾಯುಮಾಲಿನ್ಯದಿಂದಾಗಿ ಮಕ್ಕಳಿಗೆ ಅಸ್ತಮಾ, ಉಸಿರಾಟದ ತೊಂದರೆ ಮುಂತಾದ ಆರೋಗ್ಯ ಸಮಸ್ಯೆಗಳು ಉಂಟಾಗುವ ಭೀತಿಯಿಂದ ಶುಕ್ರವಾರದಂದು ಕೆಲ ಖಾಸಗಿ ಶಾಲೆಗಳು ರಜೆ ಘೋಷಿಸಿದ್ದವು. ಕಳೆದ 17 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಅತಿ ಹೆಚ್ಚು ಹೊಗೆ ಆವರಿಸಿ, ಆತಂಕ ಸೃಷ್ಟಿಯಾಗಿದೆ.

ವಾಯುಮಾಲಿನ್ಯಕ್ಕೆ ಸಂಬಂಧಿಸಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವು(ಎನ್‍ಜಿಟಿ) ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. “ನಮ್ಮ ಮುಂದಿನ ಪೀಳಿಗೆಗೆ ನಾವು ಎಂತಹ ವಾತಾವರಣ ನೀಡುತ್ತಿದ್ದೇವೆ? ವಾಯುಮಾಲಿನ್ಯವನ್ನು ತಡೆಗಟ್ಟಲು ಸರ್ಕಾರ ಇನ್ನೂ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ” ಎಂದೂ ಕೇಳಿದೆ.

‘ದೆಹಲಿ ಮಾಲಿನ್ಯ ಅಪಾಯಕಾರಿ ಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ಸಭೆ ನಡೆಸಿ, ಸದ್ಯಕ್ಕೆ ಒಂದು ದಿನದ ಮಟ್ಟಿಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಂತರ ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ನಾಯಕ ಸುಭಾಷ್ ಆರ್ಯ ತಿಳಿಸಿದ್ದಾರೆ.

Leave a Reply

comments

Related Articles

error: