ಸುದ್ದಿ ಸಂಕ್ಷಿಪ್ತ

ಅಕ್ರಮ ಮದ್ಯ ಮಾರಾಟ: ಓರ್ವನ ಬಂಧನ

ಸೋಮವಾರಪೇಟೆ, ಅ.5: ಸಮೀಪದ ಐಗೂರು ಗ್ರಾಮದ ಕೋಳಿ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.

ಐಗೂರು ಗ್ರಾಮದ ವಿ.ಆರ್.ರದೀಶ್ ಬಂಧಿತ ಆರೋಪಿ. ಅಕ್ರಮ ಮದ್ಯ ಮಾರಾಟದ ಕುರಿತು ಖಚಿತ ಮಾಹಿತಿ ಮೇರೆಗೆ ಅಪರಾಧ ವಿಭಾಗದ ಪಿಎಸ್‍ಐ ಮಂಚಯ್ಯ ನೇತೃತ್ವದಲ್ಲಿ ದಾಳಿ ನಡೆಸಿದ ಸಂದರ್ಭ ಕೋಳಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಲ್ಲದೇ ಮದ್ಯ ಸೇವಿಸಲು ರದೀಶ್ ಅವಕಾಶ ಮಾಡಿಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ವರದಿ: ಕೆಸಿಐ, ಎಲ್.ಜಿ)
 

 

Leave a Reply

comments

Related Articles

error: