ಕರ್ನಾಟಕಪ್ರಮುಖ ಸುದ್ದಿ

ತೇರದಾಳ ಅಲ್ಲ ಶಿಕಾರಿಪುರದಿಂದಲೇ ಸ್ಪರ್ಧಿಸುವೆ: ಬಿ.ಎಸ್.ಯಡಿಯೂರಪ್ಪ

ಬಾಗಲಕೋಟೆ,ಅ.6-ಜನತೆ ಹಾಗೂ ಕಾರ್ಯಕರ್ತರ ಬಯಕೆಯಂತೆ ನಾನು ಶಿಕಾರಿಪುರದಿಂದಲೇ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದರ ಬಗ್ಗೆ ಚರ್ಚೆ ಈಗಾಗಲೆ ಆಗಿದೆ ಇದರಲ್ಲಿ ಯಾವುದೇ ಗೊಂದಲ ಬೇಡ. ಉತ್ತರ ಕರ್ನಾಟಕದ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚನೆ ನೀಡಿದ್ದು ನಿಜ. ಬಿಜಾಪುರ, ಬಾಗಲಕೋಟೆಯ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಡ ಬಂದಿತ್ತು’. ಈ ಬಗ್ಗೆ ಇಲ್ಲಿನ ಮುಖಂಡರ ಜತೆ ಸಮಾಲೋಚನೆ ನಡೆಸಿದ್ದೇನೆ. ತೇರದಾಳದಲ್ಲಿ ನಿಲ್ಲುವುದು ಎಂದು ನಿಶ್ಚಯವಾಗಿದ್ದು, ಆದರೆ, ನನ್ನ ರಾಜಕೀಯ ಅಸ್ತಿತ್ವಕ್ಕೆ ದಾರಿ ಮಾಡಿಕೊಟ್ಟ ಶಿಕಾರಿಪುರದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರು, ಕ್ಷೇತ್ರದ ಜನತೆ ಬಯಸಿದ್ದಾರೆ. ಹೀಗಾಗಿ ತೇರದಾಳ ಕ್ಷೇತ್ರದ ಬದಲಿಗೆ ಶಿಕಾರಿಪುರದಿಂದ ಸ್ಪರ್ಧಿಸುವ ಬಗ್ಗೆ ಹೈಕಮಾಂಡ್ ಮನವೊಲಿಸುತ್ತೇನೆ ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ, ಶೋಭಾ ಕರಂದ್ಲಾಜೆ ಇತರರು ಹಾಜರಿದ್ದರು. (ವರದಿ-ಎಂ.ಎನ್)

Leave a Reply

comments

Related Articles

error: