ಮೈಸೂರು

ಕಾಂಗ್ರೆಸ್ ನಲ್ಲಿ ಸೀಮೆಎಣ್ಣೆ, ಬೆಂಕಿ ಎರಡು ಸಿಎಂ ಸಿದ್ದರಾಮಯ್ಯನವರೇ: ಎಚ್.ವಿಶ್ವನಾಥ್

ಮೈಸೂರು,ಅ.6-ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಅಲ್ಲಾ ಸ್ವತಃ ಸಿದ್ದರಾಮಯ್ಯನವರೇ ಬರಲಿ. ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಯಾರೇ ಸ್ಪರ್ಧಿಸಿದರೂ ನಾವೇ ಗೆಲ್ಲುತ್ತೇವೆ ಎಂದು ಎಂದು ಮಾಜಿ ಸಂಸದ ಅಡಗೂರು ಎಚ್.ವಿಶ್ವನಾಥ್ ಸಿದ್ದರಾಮಯ್ಯ ಅವರಿಗೆ ಬಹಿರಂಗ ಸವಾಲು ಹಾಕಿದರು.

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ನಡೆದ ಜೆಡಿಎಸ್ ಶಕ್ತಿ ಪ್ರದರ್ಶನದ ಸುದ್ದಿಗೋಷ್ಠಿಯಲ್ಲಿ, ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದು, ವಿಜಯಶಂಕರ್ ಅವರನ್ನು ಹುಣಸೂರು ಕ್ಷೇತ್ರದಿಂದ ತಮ್ಮ ವಿರುದ್ಧ ಚುನಾವಣೆಯಲ್ಲಿ ಕಣಕ್ಕಿಳಿಸಲಿದ್ದಾರೆ ಎಂಬ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ವಿಶ್ವನಾಥ್ ಹುಣಸೂರು ಕ್ಷೇತ್ರದಿಂದ ಯಾರೇ ಸ್ಪರ್ಧಿಸಿದರು ಜೆಡಿಎಸ್ ಗೆಲವು ಸಾಧಿಸುವುದು ಖಚಿತ ಎಂದರು.

ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ನಲ್ಲಿದ್ದಾಗ ಬಿಜೆಪಿ ಸೀಮೆ ಎಣ್ಣೆ, ಕಾಂಗ್ರೆಸ್ ಬೆಂಕಿ ಪೊಟ್ಟಣ ಎಂದು ಹೇಳಿದ್ದರು. ಆದರೆ ಈಗ ಕಾಂಗ್ರೆಸ್ ಪಕ್ಷದಲ್ಲಿ ಸೀಮೆ ಎಣ್ಣೆ ಹಾಗೂ ಬೆಂಕಿ ಎರಡು ಸಿಎಂ ಸಿದ್ದರಾಮಯ್ಯ ಅವರೇ ಆಗಿದ್ದಾರೆ ಎಂದು ಸಿಎಂ ವಿರುದ್ಧ ಹರಿಹಾಯ್ದರು. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: