ಮೈಸೂರು

ದಕ್ಷಿಣ ವಲಯ ಅಂತರ ವಿವಿ ಮಹಿಳಾ ಖೋ ಖೋ ಪಂದ್ಯಾವಳಿ: ಚಾಂಪಿಯನ್ ಆಗಿ ಹೊರಹೊಮ್ಮಿದ ಮೈಸೂರು ವಿವಿ ತಂಡ

ಮೈಸೂರು,ಅ.7-ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಆಯೋಜಿಸಿದ್ದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾನಿಲಯಗಳ ಮಹಿಳಾ ಖೋ ಖೋ ಪಂದ್ಯಾವಳಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಮೈಸೂರು ವಿಶ್ವವಿದ್ಯಾನಿಲಯದ ಸ್ಪೋರ್ಟ್ಸ್ ಪೆವಿಲಿಯನ್ ನಲ್ಲಿ ಶನಿವಾರ ನಡೆದ ಫೈನಲ್ ಪಂದ್ಯಾವಳಿಯಲ್ಲಿ ಕ್ಯಾಲಿಕಟ್ ಹಾಗೂ ಮೈಸೂರು ವಿಶ್ವವಿದ್ಯಾನಿಲಯ ಸೆಣಸಾಟ ನಡೆಸಿತು. ಅಂತಿಮವಾಗಿ ಮೈಸೂರು ವಿಶ್ವವಿದ್ಯಾನಿಲಯ ತಂಡ ಕ್ಯಾಲಿಕಟ್ ತಂಡವನ್ನು ಸೋಲಿಸಿ ಗೆಲುವಿನ ನಗೆ ಬೀರಿದೆ.

ವಿಜೇತ ತಂಡದೊಂದಿಗೆ ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಉಪನಿರ್ದೇಶಕ ಕೃಷ್ಣಯ್ಯ ಇತರರನ್ನು ಚಿತ್ರದಲ್ಲಿ ಕಾಣಬಹುದು.(ವರದಿ-ಎಂ.ಎನ್)

Leave a Reply

comments

Related Articles

error: