ಸುದ್ದಿ ಸಂಕ್ಷಿಪ್ತ

ಪ್ರಸಾದ್ ಪಕ್ಷೇತರರಾಗಿ ಸ್ಪರ್ಧಿಸಿ ತಾಕತ್ತು ತೋರಿಸಿ: ಎನ್. ಸುಬ್ರಹ್ಮಣ್ಯ

ಸಚಿವ ಸಂಪುಟದಿಂದ ತೆಗೆದು ಹಾಕಿದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೆಡ್ಡು ಹೊಡೆದು ನಿಂತಿರುವ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಮುಂಬರುವ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ತಮ್ಮ ತಾಕತ್ತು ತೋರಿಸಲಿ ಎಂದು ಜೆಡಿಎಸ್ ಮುಖಂಡ ಎನ್‍. ಸುಬ್ರಹ್ಮಣ್ಯ ಆಗ್ರಹಿಸಿದ್ದಾರೆ.

ಜಾತ್ಯಾತೀತ ಮತ್ತು ಬುದ್ಧ ತತ್ವಗಳಲ್ಲಿ ಅಪಾರವಾದ ನಂಬಿಕೆಯುಳ್ಳ ಪ್ರಸಾದ್ ಅವರು ತಮ್ಮ ಬೆಂಬಲಕ್ಕಿರುವ ಜನತೆ ಹಾಗೂ ವಿವಿಧ ಪಕ್ಷಗಳ ಮುಖಂಡರ ಮನಸ್ಥಿತಿಯನ್ನು ಅರ್ಥಮಾಡಿಕೊಂಡು ತಮ್ಮ ರಾಜಕೀಯ ಸಾಮರ್ಥ್ಯವನ್ನು ತೋರಿಸಲು ಇದು ಸಕಾಲವಾಗಿದೆ ಎಂದು ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು.

Leave a Reply

comments

Related Articles

error: