ಕರ್ನಾಟಕ

ಶಿಕ್ಷಣ ಎಲ್ಲರ ಸ್ವತ್ತು ಶ್ರಮವಹಿಸಿ ಕಲಿತವರಿಗೆ ಯಶಸ್ಸು : ಸಚಿವ ಎ. ಮಂಜು

ಹಾಸನ (ಅ.7): ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ತುಟ್ಟಿಭತ್ಯೆಯನ್ನು ಶೇ 2 ರಷ್ಟು ರಾಜ್ಯ ಸರ್ಕಾರ ಹೆಚ್ಚಿಸಿದೆ, ಹಾಗಾಗಿ ಸರ್ಕಾರಿ ನೌಕರರಿಗೆ ಇದರಿಂದ ಪ್ರಯೋಜನಕಾರಿಯಾಗುತ್ತದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎ. ಮಂಜು ಅವರು ಹೇಳಿದರು.

ನಗರದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲ ಇಂದು (ಶನಿವಾರ) ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ವತಿಯಿಂದ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಹೆಚ್ಚು ವಿದ್ಯಾಭ್ಯಾಸದಲ್ಲಿ ತೊಡುಗಿಕೊಳ್ಳಲು ಇಂತಹ ಪ್ರತಿಭಾ ಪುರಸ್ಕಾರದಿಂದ ಪ್ರೋತ್ಸಾಹ ದೊರೆಯುತ್ತದೆ ಎಂದರು.

ಶಿಕ್ಷಣ ಎಲ್ಲರ ಸ್ವತ್ತು ಶ್ರಮವಹಿಸಿ ಕಲಿತವರಿಗೆ ಯಶಸ್ಸು ಸಿಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎ. ಮಂಜು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಜಿಲ್ಲಾ ಅಧ್ಯಕ್ಷರಾದ ಬಿ.ಪಿ. ಮಂಜೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವ ವೇತನ ಭತ್ಯೆ ಕೇಂದ್ರ ಸರ್ಕಾರಿ ನೌಕರರಿಗೆ ನೀಡುತ್ತಿರುವ ವೇತನ ಭತ್ಯೆಗೆ ಹೋಲಿಸಿದರೆ ತೀರಾ ಕಡಿಮೆ ಇದೆ ಎಂದರು.

ಜಿಲ್ಲೆಯ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಎಲ್ಲಾ ತಾಲ್ಲೂಕುಗಳ 400 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತ್ತು. ವಿವಿಧ ಜಿಲ್ಲೆಯ ಸಂಘದ ಅಧ್ಯಕ್ಷರುಗಳಿಗೆ, ಪದಾಧಿಕಾರಿಗಳಿಗೆ, ತಾಲ್ಲೂಕು ಶಾಖೆಗಳ ಅಧ್ಯಕ್ಷರುಗಳಿಗೆ ಸನ್ಮಾನಿಸಲಾಯಿತು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಕುಮಾರಿ ಈ.ಸಿ. ದ್ವಿತೀಯ ಅವರು ಪ್ರಾಸ್ತಾವಿಕ ನುಡಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು 1920 ರಲ್ಲಿ ಸ್ಥಾಪನೆಯಾಗಿ ಕತ್ಯರ್ವ ನಿರ್ವಹಿಸಿತ್ತಿದೆ. ಸಂಘವು ಕೇವಲ ಸರ್ಕಾರಿ ನೌಕರರ ಶ್ರೇಯಾಭಿವೃದ್ಧಿ ಮಾಡದೇ ಶ್ರೀ ಸಾಮಾನ್ಯರನ್ನು ಅಭಿವೃದ್ಧಿಗೂ ಗಮನ ಹರಿಸಿದೆ ಎಂದರು.

ವಿದ್ಯಾಭ್ಯಾಸದಲ್ಲಿ ಮಕ್ಕಳಿಗೆ ಒತ್ತಡ ಹೇರಬೇಡಿ, ಸಂಪೂರ್ಣ ಆಯ್ಕೆಯ ಅವಕಾಶ ನೀಡಿ, ಅವರಿಗೆ ಪ್ರೋತ್ಸಾಹ ನೀಡಿ ಎಂದು ಪೋಷಕರಿಗೆ ತಿಳಿ ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್‍ವಾಡ್ ಅವರು ಮಾತನಾಡಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಮಕ್ಕಳಿಗೆ ಶುಭ ಹಾರೈಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಎಂ. ಜಾನಕಿ ಅವರು ಮಾತನಾಡಿ ಮಕ್ಕಳಲ್ಲಿ ಓದುವ ಆಸಕ್ತಿ ಹೆಚ್ಚಿಸುವ ಮೂಲಕ ದೇಶಕ್ಕೆ ಒಳ್ಳೆಯ ಕೊಡುಗೆಗಳನ್ನು ನೀಡಿ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ವೇತಾ ದೇವರಾಜ್, ವಿಧಾನ ಪರಿಷತ್ ಸದಸ್ಯರಾದ ಗೋಪಾಲಸ್ವಾಮಿ, ಜಿಲ್ಲಾಧಿಕಾರಿಗಳಾದ ರೋಹಿಣಿ ಸಿಂಧೂರಿ ದಾಸರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರಾದ ಎಚ್.ಕೆ ರಾಮು, ಪ್ರಧಾನ ಕಾರ್ಯದರ್ಶಿಯಾದ ಮಾಲತೇಶ ವೈ. ಅಣ್ಣಿಗೇರಿರವರು, ಸಂಘದ ಖಜಾಂಚಿ ಯೋಗಾನಂದ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರವಿ ನಾಕಲಗೂಡು, ಜಿಲ್ಲಾ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನಾಯಕರಹಳ್ಳಿ ಮಂಜೇಗೌಡ, ಸಂಘದ ಕಾರ್ಯದರ್ಶಿ ಕೆ.ಎಂ ಶ್ರೀನಿವಾಸ್, ಹಾಗೂ ಜಿಲ್ಲೆಯ ವಿವಿಧ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದ್ಯಸರು, ಶಿಕ್ಷಕರು, ಪೋಷಕರು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

(ಎನ್.ಬಿ.ಎನ್)

Leave a Reply

comments

Related Articles

error: