ಮೈಸೂರು

ಮೈಸೂರಿನಲ್ಲಿ ತಿರಂಗಾ ಯಾತ್ರೆಗೆ ಚಾಲನೆ ಸರ್ಕಾರದ ವಿರುದ್ಧ ಹರಿಹಾಯ್ದ ಬಿಎಸ್ ವೈ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನಗರದ ಮಾತೃಮಂಡಲಿ ವೃತ್ತದಲ್ಲಿ ತಿರಂಗಾ ಯಾತ್ರೆಗೆ ಚಾಲನೆ ಸೋಮವಾರ ನೀಡಿದರು.

ಬಳಿಕ ಮಾತನಾಡಿದ ಅವರು ಆಮ್ನೆಷ್ಟಿ ಸಂಸ್ಥೆಯಲ್ಲಿ ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಯಾವ ಕ್ರಮವನ್ನೂ ಕೈಗೊಳ್ಳದೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು. ಎಬಿವಿಪಿ ವಿದ್ಯಾರ್ಥಿಗಳು ರಾಷ್ಟ್ರವನ್ನು ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಆದರೆ ಪೊಲೀಸರು ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಎಲ್ಲೆಡೆ ಹಿಂಸೆ ತಾಂಡವವಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.  ಈ ಕಾರ್ಯಕ್ರಮವು ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಗಳ ಕುರಿತು ಹಾಗೂ ರಾಷ್ಟ್ರೀಯತೆಯ ಜಾಗೃತಿ ಮೂಡಿಸುವುದಾಗಿದ್ದು ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬೈಕ್ ರ್ಯಾಲಿ ನಡೆಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಮಂಜುನಾಥ್ ಅವರ ಬೈಕ್ ಹಿಂಬದಿಯಲ್ಲಿ ಕುಳಿತು ಕಲಾಮಂದಿರ ಮೂಲಕ ಸಾಗಿ ಒಂಟಿಕೊಪ್ಪಲ್ ಮಾರ್ಗವಾಗಿ ಸಂಚರಿಸಿದರು.

ಪಕ್ಷದ ಕಾರ್ಯಕರ್ತರು ಕೈಯಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ದ್ವಿಚಕ್ರ, ಚತುಶ್ಚಕ್ರ ವಾಹನಗಳಲ್ಲಿ ವಂದೇ ಮಾತರಂ, ಭಾರತಮಾತಾಕೀ ಜೈಘೋಷಣೆಗಳನ್ನು ಕೂಗುತ್ತ ಸಾಗುತ್ತಿರುವುದು ಕಂಡು ಬಂತು.

Leave a Reply

comments

Tags

Related Articles

error: