ಪ್ರಮುಖ ಸುದ್ದಿಮೈಸೂರು

ರವಿ ಸಾವು ಅಪಘಾತವಲ್ಲ, ಕೊಲೆ: ಸಂಸದ ಪ್ರತಾಪ್ ಸಿಂಹ

4708ಪಿರಿಯಾಪಟ್ಟಣ ತಾಲೂಕು ಬಿಜೆಪಿ ಕಾರ್ಯಕರ್ತ ಮಾಗಳಿ ಜೆ.ರವಿ ಅವರ ಸಾವು ಅಪಘಾತವಲ್ಲ, ರಾಜಕೀಯ ಪ್ರೇರಿತ ಕೊಲೆ ಎಂದು ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.

ಅವರು, ರವಿ ಮರಣೋತ್ತರ ಪರೀಕ್ಷೆ ವೇಳೆ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶವಾಗಾರದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಟಿಪ್ಪು ಜಯಂತಿ ಕುರಿತ ನಡೆದ ಸೌಹಾರ್ದ ಸಭೆಯೂ ಪಿರಿಯಾಪಟ್ಟಣ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಶುಕ್ರವಾರ ಸಂಜೆ ಜರುಗಿದ್ದು, ಮುಗಿಸಿಕೊಂಡು ಬೈಕಿನಲ್ಲಿ ಮನೆಗೆ ತೆರಳುವ ವೇಳೆ ಸಾವು ಸಂಭವಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ. ಅಲ್ಲದೇ ರವಿಯ ತಲೆಗೆ ಮಚ್ಚಿನಿಂದ ಹೊಡೆದಂತಹ ಗಾಯಗಳಾಗಿದ್ದು ದೇಹದ ಇನ್ಯಾವುದೇ ಭಾಗಕ್ಕೂ ಕನಿಷ್ಠ ತರಚಿದ ಗಾಯವೂ ಆಗಿಲ್ಲ. ವಾಹನ ಯಥಾಸ್ಥಿತಿಯಲ್ಲಿದ್ದು ಅಪಘಾತವಾದ ಯಾವ ಕುರುಹು ಇಲ್ಲ, ಬೇರೆ ವಾಹನ ಡಿಕ್ಕಿ ಹೊಡೆದಿದ್ದರೆ ವಾಹನವು ಜಖಂಗೊಳ್ಳಬೇಕಿತ್ತು.  ಒಂದು ವೇಳೆ ಅಪಘಾತವಾಗಿದ್ದರೆ ರವಿ ಅವರ ದೇಹದ ಇತರ ಭಾಗಗಳಿಗೂ ಗಾಯಗಳಾಗಬೇಕಿತ್ತು ಇವನ್ನೆಲ್ಲ ಗಮನಸಿದರೆ ರವಿಯನ್ನು ವ್ಯವಸ್ಥಿತವಾಗಿ ಕೊಲೆ ಮಾಡಿ ಅದಕ್ಕೆ ರಸ್ತೆ ಅಪಘಾತದ ಬಣ್ಣ ಹಚ್ಚುತ್ತಿದ್ದಾರೆ ಎಂದು ಸಂಸದರು ಆರೋಪಿಸಿದರು.

ದುಷ್ಕರ್ಮಿಗಳು ರವಿಯ ತಲೆಗೆ ಮಚ್ಚು ಅಥವಾ ಮಾರಕಾಸ್ತ್ರದಿಂದ ಬಲವಾಗಿ ಹೊಡೆದ ಪರಿಣಾಮ ನೆಲಕ್ಕುರುಳಿ ಬಿದ್ದು ಮೃತಪಟ್ಟಿದ್ದಾರೆ. ಟಿಪ್ಪು ಜಯಂತಿ ಆಚರಣೆ ಸಂಬಂಧ ಸೌಹಾರ್ದ ಸಭೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ದುಷ್ಕರ್ಮಿಗಳು ರವಿಯನ್ನು ಹಿಂಬಾಲಿಸಿ ಹತ್ಯೆಗೈದಿದ್ದು, ಇದಕ್ಕೆ ರಾಜಕೀಯ ದ್ವೇಷವೇ ಕಾರಣ. ಈ ಸಾವು ಆಕಸ್ಮಿಕ ಅಲ್ಲ ಕೊಲೆಯಾಗಿದೆ ಎಂದು ಖಡಾಖಂಡಿತವಾಗಿ ನುಡಿದರು. ಪೊಲೀಸರು ಈ ಬಗ್ಗೆ ಕೂಲಂಕುಷ ತನಿಖೆ ನಡೆಸಿ ತಪ್ಪಿತಸ್ಥರನ್ನು ಶೀಘ್ರದಲ್ಲಿಯೇ ಬಂಧಿಸಬೇಕು. ಪಟ್ಟಭದ್ರ ಹಿತಾಸಕ್ತಿಗಳಿಗೆ ಅಂಜಿ ನ್ಯಾಯಯುತ ತನಿಖೆ ನಡೆಯದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

800x480_image53984977ವರದಿ ಇನ್ನೂ ಬಂದಿಲ್ಲ : ಮಾಗಳಿ ಜೆ.ರವಿ ಮೃತದೇಹದ ಮರಣೋತ್ತರ ಪರೀಕ್ಷೆ ವರದಿಯೂ ಇನ್ನೂ ಬಂದಿಲ್ಲ, ನಿಖರ ಮಾಹಿತಿ ಇಲ್ಲದೆ ಯಾವ ನಿರ್ಧಾರವನ್ನು ಕೈಗೊಳ್ಳಲಾಗುವುದಿಲ್ಲ, ಮರಣೋತ್ತರ ಪರೀಕ್ಷೆ ವರದಿ ಬರಲು ಇನ್ನೂ ಎರಡು ಮೂರು ದಿನಗಳ ಕಾಲ ಸಮಯ ಹಿಡಿಯುವುದು ವರದಿ ಬಂದ ನಂತರ ಸಾವಿಗೆ ಕಾರಣ ತಿಳಿಯಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರು ತಿಳಿಸಿದ್ದಾರೆ.

Leave a Reply

comments

Related Articles

error: