ಮೈಸೂರು

ಸಿಎಂರನ್ನು ಸೋಲಿಸಲು ಜೆಡಿಎಸ್, ಬಿಜೆಪಿ ಷಡ್ಯಂತ್ರದಿಂದ ಸಾಧ್ಯವಿಲ್ಲ: ಡಾ.ಎಚ್.ಸಿ.ಮಹದೇವಪ್ಪ

ಮೈಸೂರು,ಅ.9-ನಂಜನಗೂಡು ಉಪ ಚುನಾವಣೆಯಲ್ಲೇ ಜನ ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರಿಗೆ ಪಾಠ ಕಲಿಸಿದ್ದಾರೆ. ಇನ್ನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಪ್ರಸಾದ್ ಬಂದು ಏನು ಮಾಡುತ್ತಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪ್ರಸಾದ್ ಗೆ ತಿರುಗೇಟು ನೀಡಿದ್ದಾರೆ.

ಜಲದರ್ಶಿನಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ರನ್ನು ಸೋಲಿಸುವುದೇ ನನ್ನ ಮೂಲ ಗುರಿ ಎಂಬ ಶ್ರೀನಿವಾಸಪ್ರಸಾದ್ ಅವರ ಹೇಳಿಕೆಗೆ ಸಚಿವರು ಈ ಮೇಲಿನಂತೆ ಎದುರೇಟು ನೀಡಿದರು. ಶಾಸಕ ಜಿ.ಟಿ.ದೇವೇಗೌಡ, ಮಾಜಿ ಸಂಸದ ಎಚ್.ವಿಶ್ವನಾಥ್ ಎಲ್ಲರ ಮನೆ ಅಲೆಯೋದು ಹೊಸದೇನಲ್ಲ. ಪ್ರಸಾದ್ ಮನೆಗೆ ತೆರಳಿದ ತಕ್ಷಣ ಜಿಲ್ಲಾ ರಾಜಕಾರಣದಲ್ಲಿ ಯಾವ ವ್ಯತ್ಯಾಸವು ಆಗುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್ ಹಾಗೂ ಬಿಜೆಪಿ ಷಡ್ಯಂತ್ರ ಮಾಡುತ್ತಿವೆ. ಇವರ ಯಾವ ಷಡ್ಯಂತ್ರಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಮತದಾರರು ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದರು.

ನಾನು ನಂಜನಗೂಡು ಹಾಗೂ ತಿ.ನರಸಿಪುರ ಕ್ಷೇತ್ರದಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ಜನ ಹಾಗೂ ಹೈ ಕಮಾಂಡ್ ಬಯಸಿದರೆ ಪುತ್ರ ಸುನೀಲ್ ಬೋಸ್ ಸ್ಪರ್ಧಿಸುತ್ತಾನೆ. ಆದರೆ ಯಾವ ಕ್ಷೇತ್ರ ಅಂತಾ ಈಗಲೇ ಹೇಳಲು ಸಾಧ್ಯವಿಲ್ಲ ಸಮಯ ಬಂದಾಗ ಹೇಳುತ್ತೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಎಂ.ಕೆ.ಸೋಮಶೇಖರ್, ವಾಸು, ಜಿಲ್ಲಾಧಿಕಾರಿ ಡಿ.ರಂದೀಪ್ ಇದ್ದರು. (ವರದಿ-ಎಸ್.ಎನ್, ಎಂ.ಎನ್)

 

Leave a Reply

comments

Related Articles

error: