ಕರ್ನಾಟಕ

ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಅನಿಲ ಭಾಗ್ಯ ಯೋಜನೆ ಜಾರಿ

ರಾಜ್ಯ(ಬೆಂಗಳೂರು)ಅ.9:- ಬಡವರಿಗೆ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಇದೇ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಯಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿಂದು ನಡೆದ ಈ ಯೋಜನೆಯ ಅನುಷ್ಠಾನ ಕುರಿತ ಸಭೆಯಲ್ಲಿ ಬರುವ ಡಿಸೆಂಬರ್ 1 ರಿಂದ ಈ ಯೋಜನೆಯನ್ನು ಜಾರಿ ಮಾಡಲು ನಿರ್ಧರಿಸಲಾಗಿದೆ. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆಹಾರ ಸಚಿವ ಯು.ಟಿ. ಖಾದರ್ ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಸಿಗದ ರಾಜ್ಯದ ಬಡವರಿಗೆ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ ಅಡುಗೆ ಸಿಲಿಂಡರ್, ಸ್ಟೌ, ರೆಗ್ಯುಲೇಟರ್ ಇವುಗಳನ್ನು ನೀಡಲಾಗುವುದು ಎಂದರು.

ಈ ಯೋಜನೆಗೆ 1200 ಕೋಟಿ ರೂ.ಗಳನ್ನು ಒದಗಿಸಲಾಗಿದ್ದು, ಪ್ರತಿ ಫಲಾನುಭವಿಗೆ 4400 ರೂ.ಗಳ ಖರ್ಚು ಬರಲಿದೆ ಎಂದು ಹೇಳಿದರು. ಈ ಸಂದರ್ಭ ಆಹಾರ ಇಲಾಖೆಯ ಅಧಿಕಾರಿಗಳು ಇದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: