ಮೈಸೂರು

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

2016-16ನೇ ಸಾಲಿನಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರತಿ ತಾಲೂಕಿನ ಎಸ್‍ಎಸ್‍ಎಲ್‍ಸಿ ಮತ್ತು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಮೂರು ವಿದ್ಯಾರ್ಥಿಗಳು ಹಾಗೂ ಮೂರು ವಿದ್ಯಾರ್ಥಿನಿಯರಿಗೆ ಇತ್ತೀಚಿಗೆ ಮೈಸೂರು ವಿವಿ ರಾಣಿ ಬಹದ್ದೂರ್‍ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷ ಕೆ.ಜಿ. ಮಹೇಶ್ ಅಧ್ಯಕ್ಷತೆಯಲ್ಲಿ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು. ಉನ್ನತ ವ್ಯಾಸಂಗದ 8 ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರಿಗೆ ಉನ್ನತ ವ್ಯಾಸಂಗ ಪ್ರೋತ್ಸಾಹ ಧನ ತಲಾ 20 ಸಾವಿರ ರು.ಗಳಂತೆ ನೀಡಲಾಯಿತು.

ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ಮೈಮುಲ್ ರೈತ ಕಲ್ಯಾಣ ಟ್ರಸ್ಟ್ ವತಿಯಿಂದ ಒಕ್ಕೂಟದ ವ್ಯಾಪ್ತಿಯ ಹಾಲು ಉತ್ಪಾದಕರಿಗೆ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಲು ಉತ್ಪಾದಕ ಸದಸ್ಯರು ಅಕಾಲಿಕ ಮರಣ ಹೊಂದಿದಾಗ 10,000 ರು. ಮರಣ ಪರಿಹಾರ, ಆಮ್‍ ಆದ್ಮಿ ಭೀಮ ಯೋಜನೆ, ಯಶಸ್ವಿನಿ ಯೋಜನೆಗೆ ಪ್ರತಿ ಸದಸ್ಯರಿಗೆ ಪಾವತಿಸುವ ಮೊತ್ತದಲ್ಲಿ ಶೇ.50 ಭಾಗದಷ್ಟು ಅನುದಾನ, ವಿದ್ಯಾರ್ಥಿ ವೇತನ ನೀಡುವುದರ ಜೊತೆಗೆ ಹಾಲು ಉತ್ಪಾದಕರ ಮಕ್ಕಳಿಗೆ ಉನ್ನತ ವ್ಯಾಸಂಗಕ್ಕಾಗಿ ಅನುಕೂಲವಾಗಲು ಮಹಿಳಾ ವಸತಿ ನಿಲಯವನ್ನು ಪ್ರಾರಂಭಿಸಲಾಗಿದೆ.

ಕಾರ್ಯಕ್ರಮದಲ್ಲಿ ಒಕ್ಕೂಟದ ನಿರ್ದೇಶಕರಾದ ಕೆ. ಈರೇಗೌಡ, ಎ.ಟಿ. ಸೋಮಶೇಖರ್, ಕೆ.ಸಿ. ಬಲರಾಮ, ಕೆ.ಎಸ್. ಕುಮಾರ್, ಪ್ರಸನ್ನ, ಸಿದ್ದೇಗೌಡ, ದಾಕ್ಷಾಯಿಣಿ, ಲೀಲಾ ನಾಗರಾಜ್ ಹಾಗೂ ನಾಮ ನಿರ್ದೇಶಕರಾದ ಎ. ಶಿವಗಾಮಿ, ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಎಂ.ಎಸ್. ವಿಜಯ್ ಕುಮಾರ್‍ ಹಾಗೂ ಒಕ್ಕೂಟದ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

comments

Related Articles

error: