ಸುದ್ದಿ ಸಂಕ್ಷಿಪ್ತ

ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಮಡಿಕೇರಿ, ಅ.10: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ, ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಅ.10 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ನಡೆಯಲಿದೆ.

ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾಸರ್ ಆರ್‍ಕೆಜಿಎಂಎಂ ಮಹಾಸ್ವಾಮೀಜಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬೆಳ್ಯಪ್ಪ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ವಿ.ಹನುಮಂತಪ್ಪ, ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಪ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ಮಾನಸಿಕ ಕಾರ್ಯಕ್ರಮ ಅಧಿಕಾರಿ ಡಾ.ಶಿವಕುಮಾರ್ ಇತರರು ಭಾಗವಹಿಸಲಿದ್ದಾರೆ. ಮನೋವೈದ್ಯರಾದ ಡಾ.ಡೇವಿನ್ ಲಿನೆಕರ್ ಕರ್ಕಡ ಅವರು ಮಾನಸಿಕ ಅಸ್ವಸ್ಥತೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

 

 

Leave a Reply

comments

Related Articles

error: