
ಮೈಸೂರು
ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮೈಸೂರು (ಅ.9): ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ನೀಡುವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.
ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ಸಮಾಜ ಸೇವೆ ಹಾಗೂ ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳನ್ನು ಗುರುತಿಸಿ,ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ನೀಡುವ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. 05 ವರ್ಷ ಮೇಲ್ಪಟ್ಟಿರುವ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗುವುದು. ಈ ಜಿಲ್ಲಾ ಮಟ್ಟದ ಪ್ರಶಸ್ತಿಯು ತಲಾ ರೂ 10,000 ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ಒಳಗೊಂಡಿರುತ್ತದೆ.
ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಿಎಸ್-1, ಹೈಟೆಂಕ್ಷನ್ ಲೈನ್ ರಸ್ತೆ, ಕೃಷ್ಣದೇವರಾಯ ಸರ್ಕಲ್, ವಿಜಯನಗರ 2ನೇ ಹಂತ, ಮೈಸೂರು-17, ಇಲ್ಲಿ ಕಚೇರಿಗೆ ಸಲ್ಲಿಸುವುದು. ಕನ್ನಡ ಭಾಷೆಯಲ್ಲಿ ಭರ್ತಿಮಾಡಿದ ಅರ್ಜಿಗಳನ್ನು ಅಕ್ಟೋಬರ್ 21, 2017ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 2498031 ಅಥವಾ 2495432 ಅನ್ನು ಸಂಪರ್ಕಿಸಿ.
(ಎನ್ಬಿಎನ್)