ಸುದ್ದಿ ಸಂಕ್ಷಿಪ್ತ

ದತ್ತಿ ಉಪನ್ಯಾಸದ ಸಮಾರೋಪ ಸಮಾರಂಭ: ಅ.11 ಕ್ಕೆ

ಸೋಮವಾಪೇಟೆ, ಅ.10: ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗು ಶ್ರೀ ಕುಮಾರೇಶ್ವರ ಜಯಂತಿ ಮಹೋತ್ಸವ ಸಮಿತಿ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಹಾನಗಲ ಶ್ರೀ ಕುಮಾರ ಶಿವಯೋಗಿ ಗಳ 150 ನೇ ಜನ್ಮ ದಿನಾಚರಣೆ ಅಂಗವಾಗಿ ಅ.10 ರಂದು ಮಧ್ಯಾಹ್ನ ಎರಡು ಗಂಟೆಗೆ ಶನಿವಾರ ಸಂತೆಯ ವಿಘ್ನೇಶ್ವರ ಬಾಲಕಿಯರ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಹಾಗು ಅ.11 ರಂದು ಅಪರಾಹ್ನ 3 ಗಂಟೆಗೆ ಕುಶಾಲನಗರದ ಶ್ರೀ ವಿವೇಕಾನಂದ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ದತ್ತಿ ಉಪನ್ಯಾಸದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ , ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಮಹಾರಾಷ್ಟ್ರ ಅಕ್ಕಲಕೋಟೆ ಮಠದ ಶ್ರೀ ಚನ್ನಬಸವ ದೇವರು ಸ್ವಾಮೀಜಿ, ಮುದ್ದಿನಕಟ್ಟೆ ಮಠಾಧೀಶರಾದ ಶ್ರೀ ಅಭಿನವ ಸಿದ್ದಲಿಂಗ ಸ್ವಾಮೀಜಿ , ಬೆಳಗಾವಿ ಜಿಲ್ಲೆಯ ಹಿರೇಮಠಾಧೀಶರಾದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬಾಗಲಕೋಟೆ ಬೂದಿಹಾಳ ಮಠದ ಶ್ರೀ ಸಂಗಮೇಶ್ವರ ದೇವರು ಸ್ವಾಮೀಜಿ, ವಿವೇಕಾನಂದ ವಿದ್ಯಾಸಂಸ್ಥೆಯ ಶಂಭುಲಿಂಗಪ್ಪ ಭಾಗವಹಿಸಲಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: