ಮೈಸೂರು

ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಕಾರರು

ಮೈಸೂರು,ಅ.10-ಮಾದಿಗ ಸಮುದಾಯದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದ ಮಾದಿಗ ಸಮುದಾಯದವರು ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಸಿದ್ದರಾಮಯ್ಯ ನಿವಾಸದತ್ತ ತೆರಳಲು ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆದರು.

ಇದರಿಂದ ಪ್ರತಿಭಟನಕಾರರು ವಿಜಯಬ್ಯಾಂಕ್ ವೃತ್ತದಲ್ಲೇ ಪ್ರತಿಭಟನೆ ನಡೆಸಲು ಮುಂದಾದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಡಾ.ಯತ್ರೀಂದ್ರ ಸಿದ್ದರಾಮಯ್ಯ ಪ್ರತಿಭಟನಕಾರರ ಜತೆ ಮಾತುಕತೆ ನಡೆಸಿ ನಿಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು ಬೇಡಿಕೆ ಈಡೇರಿಸಲು ಮನವಿ ಮಾಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನಕಾರರು ಪ್ರತಿಭಟನೆಯನ್ನು ಕೈ ಬಿಟ್ಟರು. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: