ಸುದ್ದಿ ಸಂಕ್ಷಿಪ್ತ

ಪತ್ರಕರ್ತರಿಗೆ ಹಾಗೂ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೈಸೂರು,ಅ.10 : ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರ ಹಾಗೂ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಸಂಯುಕ್ತವಾಗಿ ಅ.13ರಂದು ಬೆಳಗ್ಗೆ 10.30 ರಿಂದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಕರ್ತರು ಮತ್ತು ಕುಟುಂಬದವರಿಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಮ್ಮಿಕೊಂಡಿದೆ.

ತಜ್ಞ ವೈದ್ಯರಾದ ಡಾ.ಗೋಪಿನಾಥ್, ಡಾ.ನಾಗೇಶ್, ಡಾ.ಗುರು ಬಸವರಾಜು, ಡಾ.ಚಂದ್ರಶೆಖರ್ ಮೊದಲಾದವರು ಶಿಬಿರದಲ್ಲಿ ಭಾಗಿಯಾಗಿ ರಕ್ತದೊತ್ತಡ, ಸಕ್ಕರೆ ಖಾಯಿಲೆ, ಮೂಳೆ ಸಾಂದ್ರತೆ ಸೇರಿದಂತೆ ಹಲವಾರು ಪರೀಕ್ಷೆಗಳನ್ನು ನಡೆಸಲಿದೆ. (ಕೆ.ಎಂ.ಆರ್)

Leave a Reply

comments

Related Articles

error: