ಕರ್ನಾಟಕ

ಕಾಮಗಾರಿಯನ್ನು ನಿಲ್ಲಿಸುವಂತೆ ಒತ್ತಾಯಿಸಿ ಪಂಚಾಯತ್ ಗೆ ಮುತ್ತಿಗೆ

ರಾಜ್ಯ(ಮಡಿಕೇರಿ)ಅ.11:-  ಜನವಸತಿ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿಗೆ ಪಟ್ಟಣ ಪಂಚಾಯತ್ ಮುಂದಾಗಿದ್ದು, ಕೂಡಲೇ ಕಾಮಗಾರಿಯನ್ನು ನಿಲ್ಲಿಸುವಂತೆ ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಹದೇಶ್ವರ ಬ್ಲಾಕ್‍ನ ನೂತನ ಬಡಾವಣೆಯಾದ ಅಶೋಕ ನಗರದಲ್ಲಿ ಇಲ್ಲಿನ ಪಟ್ಟಣ ಪಂಚಾಯಿತಿ ಕಸ ವಿಲೇವಾರಿಗೆ ಕಾಮಗಾರಿ ನಡೆಸುತ್ತಿದೆ. ಇಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದು, ಚರಂಡಿಯಲ್ಲಿ ಕಸ ವಿಲೇವಾರಿ ಮಾಡದಿರುವುದರಿಂದ ಸುತ್ತಲ ಪರಿಸರ ಕಲುಷಿತಗೊಳ್ಳುತ್ತಿದ್ದು, ಸೊಳ್ಳೆಗಳು ಹೆಚ್ಚಾಗಿವೆ. ಇಂತಹ ಸ್ಥಳದಲ್ಲಿ ಪಟ್ಟಣ ಪಂಚಾಯಿತಿ ತ್ಯಾಜ್ಯ ವಿಲೇವಾರಿ ಮಾಡಲು ಮುಂದಾಗಿರುವುದು ವಿಪರ್ಯಾಸ. ಕೂಡಲೇ ಕಾಮಗಾರಿಯನ್ನು ನಿಲ್ಲಿಸುವಂತೆ ಸಿದ್ದಿವಿನಾಯಕ ಯುವಕ ಸಂಘದ ಅಧ್ಯಕ್ಷರಾದ ಗಣೇಶ್ ಒತ್ತಾಯಿಸಿದ್ದಾರೆ. ಕೂಡಲೇ ಕಾಮಗಾರಿಯನ್ನು ನಿಲ್ಲಿಸದಿದ್ದಲ್ಲಿ ನಿವಾಸಿಗಳು ಪಟ್ಟಣ ಪಂಚಾಯಿತಿ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಸಿದರು. ತ್ಯಾಜ್ಯ ವಿಲೇವಾರಿಯನ್ನು ಬೇರೆಡೆ ಮಾಡುವಂತೆ ಆಗ್ರಹಿಸಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪರವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಗುತ್ತಿಗೆದಾರರನ್ನು ಪಂಚಾಯಿತಿ ಕಚೇರಿಗೆ ಕರೆಸಿ  ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಮೌಖಿಕ ಆದೇಶ ನೀಡಿದರು. ಮನವಿ ಸಲ್ಲಿಸುವ ಸಂದರ್ಭ ಸ್ಥಳೀಯ ನಿವಾಸಿಗಳಾದ ಎಚ್.ಆರ್. ಗಿರೀಶ್, ಚಂದ್ರಶೇಖರ್ ಪುರೋಹಿತ್, ಸತೀಶ್, ದೊರೆ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: