
ದಾವಣಗೆರೆ,ಅ.10: ಪದ್ಮಾವತಿಯಾಗಿ ಫುಲ್ ಬ್ಯುಸಿಯಾಗಿರುವ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ದಾವಣೆಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ದೀಪಿಕಾ ಪಡುಕೋಣೆಯವರು ಲೈವ್ ಲವ್ ಲಾಫ್ ಫೌಂಡೇಶನ್ (ಎನ್ಜಿಓ) ಸಹಯೋಗದೊಂದಿಗೆ ನಡೆದ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾನಸಿಕ ಅಸ್ವಸ್ಥರ ಜೊತೆ ಮಾತುಕತೆ ನಡೆಸಿದರು.
ನಂತರ ದಾವಣಗೆರೆಯ ತಾಲೂಕಿನ ಮತ್ತು ಜಗಳೂರು ತಾಲೂಕಿನ ಬಿಳಿಚೋಡು, ಪಲ್ಲಾಗಟ್ಟೆ ಹಾಗೂ ಮೆಳ್ಳೆಕಟ್ಟೆ ಗ್ರಾಮಗಳಿಗೆ ಭೇಟಿ ನೀಡಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗಾಣಗಟ್ಟೆ ಮಾಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ( ವರದಿ: ಪಿ. ಜೆ )