ಪ್ರಮುಖ ಸುದ್ದಿಮೈಸೂರು

ನಾಲೆಗಳಿಗೆ ನೀರು ಹರಿಸಲು ಒತ್ತಾಯ: ಹೆದ್ದಾರಿ ತಡೆ

ಮಂಡ್ಯ: ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿದ ರೈತರು ಬೆಂಗಳೂರು ಮೈಸೂರು ಹೆದ್ದಾರಿ ತಡೆ ನಡೆಸಿದ್ದಾರೆ. ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಹೆದ್ದಾರಿ ತಡೆ ನಡೆಸಿದ ರೈತರು ಮದ್ದೂರಿನ ಕಡೆಯ ಭಾಗದವರೆಗೂ ನೀರು ಹರಿಸುವಂತೆ ಆಗ್ರಹಿಸಿದ್ದಾರೆ.

ನೀರಾವರಿ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ರೈತರ ಪಟ್ಟು ಹಿಡಿದಿದ್ದು, ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ವಾರಾಂತ್ಯ ಹಿನ್ನೆಲೆಯಲ್ಲಿ ಬೆಂಗಳೂರು – ಮೈಸೂರಿಗೆ ಪ್ರಯಾಣ ಹೊರಟಿದ್ದವರು ರೈತರ ಪ್ರತಿಭಟನೆಯಿಂದ ದಾರಿ ಸಿಗದೆ ಪರದಾಡುತ್ತಿದ್ದಾರೆ.

Leave a Reply

comments

Related Articles

error: