ಸುದ್ದಿ ಸಂಕ್ಷಿಪ್ತ

ಅ. 25ರಂದು ತಾಲೂಕಿನ ದೊಡ್ಡಮೋಳೆ ಗ್ರಾಮದಲ್ಲಿ ಅಂಚೆ ಸಂತೆ

ಚಾಮರಾಜನಗರ, ಅ. 11 :– ಅಂಚೆ ಇಲಾಖೆಯು ಚಾಮರಾಜನಗರ ತಾಲೂಕಿನ ಹರದನಹಳ್ಳಿ ಹೋಬಳಿಯ ದೊಡ್ಡಮೋಳೆ ಗ್ರಾಮದಲ್ಲಿ ಅಕ್ಟೋಬರ್ 25ರಂದು ಅಂಚೆ ಸಂತೆ ಹಮ್ಮಿಕೊಂಡಿದೆ.

ಈ ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವವಿಮೆ ಇನ್ನಿತರ ಅಂಚೆ ಯೋಜನೆಗಳನ್ನು ಸ್ವೀಕರಿಸಲಾಗುತ್ತದೆ.

ದೊಡ್ಡಮೋಳೆ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾರಾದ ಜಿ.ಸಿ. ಶ್ರೀನಿವಾಸ್ ಕೋರಿದ್ದಾರೆ. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: