ಸುದ್ದಿ ಸಂಕ್ಷಿಪ್ತ

ಕೃಷಿ ಭಾಗ್ಯ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಅ. 10 – 2017-18ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ಪಾಲಿಮನೆ, ನೆರಳು ಮನೆ, ಕೃಷಿ ಹೊಂಡ ಮತ್ತು ಡೀಸಲ್, ಸೋಲರ್ ಮೋಟಾರ್ ಘಟಕಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ರೈತರು ಸಂಬಂಧಪಟ್ಟ ತಾಲೂಕು ತೋಟಗಾರಿಕೆ ಕಚೇರಿಯಿಂದ ಅರ್ಜಿ ಪಡೆದು ಎಲ್ಲಾ ದಾಖಲಾತಿಗಳೊಡನೆ ಅಕ್ಟೋಬರ್ 24ರ ಒಳಗೆ ಸಲ್ಲಿಸಬೇಕು. ಇಲಾಖಾ ಮಾರ್ಗಸೂಚಿಯನ್ವಯ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಫಲಾನುಭವಿಗಳ ಘಟಕಗಳನ್ನು ಸರ್ಕಾರದಿಂದ ಅನುಮೋದಿತ ಕಂಪನಿಗಳ ಮೂಲಕ ಅನುಷ್ಠಾನಗೊಳಿಸುವುದು, ನಿಗದಿತ ಗುರಿಗಿಂತ ಹೆಚ್ಚಿನ ಅರ್ಜಿಗಳು ಬಂದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲೂಕು ತೋಟಗಾರಿಕೆ ಕಚೇರಿ ಮತ್ತು ತೋಟಗಾರಿಕೆ ಉಪನಿರ್ದೇಶಕರು, ತಾಂತ್ರಿಕ ಅಧಿಕಾರಿ ಅವರಿಂದ ಪಡೆಯುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: