ಸುದ್ದಿ ಸಂಕ್ಷಿಪ್ತ

ಯುವ ವೈಯಕ್ತಿಕ ಹಾಗೂ ಸಂಘ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಅ. 11:- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ 2016-17ನೇ ಸಾಲಿನಲ್ಲಿ ಉತ್ತಮ ಕಾರ್ಯ ನಿರ್ವಹಿಸಿರುವ ಯುವಕ ಯುವತಿ ಸಂಘಕ್ಕೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.

ಯುವಕ ಯುವತಿ ಸಂಘಕ್ಕೆ ತಲಾ 10 ಸಾವಿರ ರೂ.ಗಳ ನಗದು ಪ್ರಶಸ್ತಿಯೊಂದಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಜಿಲ್ಲೆಯಲ್ಲಿ ಸಂಘದ ಸದಸ್ಯರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಯುವಕ ಯುವತಿ ಸಂಘದ ಐವರು ಸದಸ್ಯರಿಗೆ ತಲಾ 5 ಸಾವಿರ ರೂ. ವೈಯಕ್ತಿಕ ನಗದು ಪ್ರಶಸ್ತಿ ನೀಡಿ ಗೌರವಿಸಲಾಗುವುದು. 2016-17ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಸಂಘಗಳು ಹಾಗೂ ಸಂಘದ ಸದಸ್ಯರು ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 21ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ 08226-224932 ಅಥವಾ ಮೊಬೈಲ್ 9482718278ನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ. ಚಲುವಯ್ಯ ತಿಳಿಸಿದ್ದಾರೆ. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: