ಮೈಸೂರು

ವಿದ್ಯಾರ್ಥಿಗಳು ಓದಿನ ಜೊತೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು : ಡಾ.ಬಂಜಗೆರೆ ಜಯಪ್ರಕಾಶ್

ಮೈಸೂರು,ಅ.11:- ಮಹಾರಾಣಿ ಮಹಿಳಾ ಕಲಾ ಕಾಲೇಜು,ಸ್ನಾತಕ ಮತ್ತು ಸ್ನಾತಕೋತ್ತರ ಕೇಂದ್ರ ವತಿಯಿಂದ 2017-18 ಸಾಲಿನ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ವೇದಿಕೆ ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಸಮಾರಂಭದಲ್ಲಿ ಸಂಸ್ಕೃತಿ ಚಿಂತಕರಾದ ಡಾ.ಬಂಜಗೆರೆ ಜಯಪ್ರಕಾಶ್ ಮಾತನಾಡಿ ಇಂದು ನಾವೆಲ್ಲಾ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕುತ್ತಿದ್ದೇವೆ.ಎಲ್ಲಾ ಕಾಲೇಜಿನಲ್ಲಿಯೂ ಎಲ್ಲಾ ರೀತಿಯ ಕಾರ್ಯಕ್ರಮ ಅಯೋಜನೆ ಮಾಡುತ್ತಾರೆ. ಪ್ರತಿ ಕಾಲೇಜಿನಲ್ಲಿಯೂ ಕೂಡ ತಮ್ಮ ಕಾಲೇಜಿನ ಫಲಿತಾಂಶಗಳನ್ನು ಭಿತ್ತಿ ಪತ್ರವನ್ನು ಅಂಟಿಸುತ್ತಾರೆ.ಅಷ್ಟೇ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಓದಿನ ಜೊತೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ನಾವು ವಿದ್ಯಾವಂತರಾಗಿ ಬಿಳಿ ಬಟ್ಟೆ ತೊಟ್ಟು ವಿದೇಶಕ್ಕೆ ಹಾರಿ ಕೆಲಸ ತೆಗೆದುಕೊಳ್ಳುವುದಲ್ಲ, ಸಮಾಜ ನಮಗೇನು ಕೊಟ್ಟಿತೋ ಹಾಗೆಯೇ ಸಮಾಜಕ್ಕೆ ನಾವು ಏನಾದರು ಕೊಡಬೇಕು.ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸಮಾರಂಭದಲ್ಲಿ ಪ್ರಾಂಶುಪಾಲರಾದ ಡಾ.ಎಂ.ಚನ್ನಬಸವೇಗೌಡ, ವೇದಿಕೆಯ ಕಾರ್ಯದರ್ಶಿ ಪ್ರೊ.ನಂಜುಂಡಯ್ಯ,  ಸೇರಿದಂತೆ ಹಲವರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: