ಕರ್ನಾಟಕ

ಜೋಯಪ್ಪ ನಿರ್ದೇಶಕ ಸ್ಥಾನ ಅನರ್ಹ

ರಾಜ್ಯ(ಮಡಿಕೇರಿ) ಅ.11 :- ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಎಂ.ಬಿ.ಜೋಯಪ್ಪ ಅವರನ್ನು ಮುಂದಿನ 2 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಿ ಮಡಿಕೇರಿ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಆದೇಶ ಹೊರಡಿಸಿದ್ದಾರೆ.

ಸತತವಾಗಿ ಮೂರು ಆಡಳಿತ ಮಂಡಳಿಯ ಸಭೆಗಳಿಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಘದ ಸದಸ್ಯರಾದ ಮಂಞರ ಕೆ.ಕುಟ್ಟಪ್ಪ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: