ಸುದ್ದಿ ಸಂಕ್ಷಿಪ್ತ

ಕಳಪೆ ಕಾಮಗಾರಿ ವಿರುದ್ಧ ಪ್ರತಿಭಟನೆ

ಸೋಮವಾರಪೇಟೆ,ಅ.11: -ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ತಾಲೂಕಿನ ನೇರುಗಳಲೆ-ಹೊಸಳ್ಳಿ ರಸ್ತೆಗೆ 523.10 ಲಕ್ಷ ರೂ. ಮಂಜೂರಾಗಿದ್ದು, ಇದುವರೆಗೂ ಕಾಮಗಾರಿ ಪೂರೈಸಿಲ್ಲ. ಕೈಗೊಳ್ಳಲಾಗಿರುವ ಕಾಮಗಾರಿಯೂ ಕಳಪೆಯಾಗಿದ್ದು, ಈ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ತಾ. 13ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಬಗ್ಗನ ಅನಿಲ್‍ಕುಮಾರ್ ತಿಳಿಸಿದ್ದಾರೆ.

ಕಾಮಗಾರಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭ ಆಗ್ರಹಿಸಲಾಗಿತ್ತು. ತಾ. 16.9.2017ರೊಳಗೆ ಪರಿಶೀಲಿಸುವದಾಗಿ ಭರವಸೆ ನೀಡಿದ್ದರೂ ಸಹ ಇದುವರೆಗೂ ಯಾವದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆ ತಾ. 13ರಂದು ಪಿಎಂಜಿಎಸ್‍ವೈ ಅಭಿಯಂತರರ ಮಡಿಕೇರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಅನಿಲ್ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: