
ಕರ್ನಾಟಕ
ಮಕ್ಕಳ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನ
ರಾಜ್ಯ(ಬೆಳಗಾವಿ)ಅ.12:- ಮಕ್ಕಳ ಕತ್ತು ಕೊಯ್ದು ಹತ್ಯೆ ಮಾಡಿದ ತಂದೆ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ಪ್ರಿಯಾಂಕ (6), ಪವಿತ್ರ (8) ಎಂಬವರೇ ತಂದೆಯ ಕುಕೃತ್ಯಕ್ಕೆ ಬಲಿಯಾದವರಾಗಿದ್ದು, ಆತ್ಮಹತ್ಯೆಗೆ ಯತ್ನಿಸಿದ ಸಿದ್ದಪ್ಪ ಕುಳ್ಳೂರು ಸ್ಥಿತಿ ಗಂಭೀರವಾಗಿದ್ದು ರಾಮದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ರಾಮದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ಕೆ.ಎಸ್,ಎಸ್.ಎಚ್)