
ಕರ್ನಾಟಕ
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಆಹ್ವಾನ
ಮಂಡ್ಯ, (ಅ.12): ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿ ಗ್ರೇಡ್-1 ಬಾಕಿ ಉಳಿದಿರುವ ಪರಿಶಿಷ್ಟ ಜಾತಿಯ ಎರಡು ಬ್ಯಾಕ್ಲಾಗ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಯು ಸರ್ಕಾರದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು, ಬ್ಯಾಕ್ಲಾಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ. ನೇಮಕಾತಿ ವಿಧಾನ ಮತ್ತು ಮೀಸಲಾತಿಯ ಪ್ರಮಾಣ ಪತ್ರಗಳ ಪೂರ್ಣ ಮಾಹಿತಿಗಾಗಿ ರಾಜ್ಯ ಗೆಜೆಟೆಡ್ ಪತ್ರಿಕೆ ಮತ್ತು ಜಿಲ್ಲಾಧಿಕಾರಿಗಳು, ಮಂಡ್ಯ ಜಿಲ್ಲೆ, ಮಂಡ್ಯ ಇವರ ವೆಬ್ಸೈಟ್ ನೋಡಬಹುದು. ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಮಂಡ್ಯ ಜಿಲ್ಲಾ ಪಂಚಾಯತ್ ದೂರವಾಣಿ ಸಂಖ್ಯೆ: 08232-224657, 224482, 224362 ನ್ನು ಸಂಪರ್ಕಿಸಬಹುದು.
(ಎನ್ಬಿಎನ್)