ಪ್ರಮುಖ ಸುದ್ದಿ

ಬೈಕ್ ಆಟೋ ಡಿಕ್ಕಿ: ಸವಾರ ಸಾವು

ಪ್ರಮುಖ ಸುದ್ದಿ, ದಾವಣಗೆರೆ, ಅ.೧೨: ಬೈಕ್ ಗೆ ಅಟೋ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣೆಗೆರೆಯಲ್ಲಿ ನಡೆದಿದೆ.
ಪ್ರತೀಕ್ (೨೨) ಸಾವನ್ನಪ್ಪಿದ ದುರ್ದೈವಿ. ಈತ ಜಗಳೂರು ತಾಲೂಕಿನ ಬಿದರಕೆರೆ ಗ್ರಾಮದವನಾಗಿದ್ದು, ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದಾನೆ. ತನ್ನ ಬೈಕ್‌ನಲ್ಲಿ ದಾವಣಗೆರೆ ಜಿಲ್ಲೆ ಹರಿಹರ ಪಟ್ಟಣದಲ್ಲಿ ತೆರಳುತ್ತಿದ್ದ ವೇಳೆ ಆಟೋ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕೆಳಗೆ ಬಿದ್ದ ಪ್ರತೀಕ್‌ಗೆ ತೀವ್ರ ಗಾಯವಾಗಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಈ ಸಂಬಂಧ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ ಬಿ.ಎಂ)

 

Leave a Reply

comments

Related Articles

error: