ಕರ್ನಾಟಕ

ಜುಬೈರ್ ಹತ್ಯೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯಿಸಿ ಪ್ರತಿಭಟನೆ

ರಾಜ್ಯ(ತುಮಕೂರು)ಅ.12:-  ಉಳ್ಳಾಲದಲ್ಲಿ ಕೊಲೆಯಾದ ಬಿಜೆಪಿ ಕಾರ್ಯಕರ್ತ ಜುಬೈರ್ ಅವರ ಹತ್ಯೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ  ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕಳೆದ ಕೆಲವು ದಿನಗಳ ಹಿಂದೆ ಉಳ್ಳಾಲದಲ್ಲಿ ಬಿಜೆಪಿ ಕಾರ್ಯಕರ್ತನಾದ ಜುಬೈರ ಅವರನ್ನು ಅಮಾನುಷವಾಗಿ ಹತ್ಯೆ ಮಾಡಿರುವುದನ್ನು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರತಿಭಟನಾಕಾರರು ಹೇಳಿದರು. ಪದೇ ಪದೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ಹತ್ಯೆ ಮಾಡುತ್ತಿರುವುದು ಕರಾವಳಿ ಭಾಗದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಭಯದ ವಾತಾವರಣವನ್ನು ಸೃಷ್ಠಿಸಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಮತ್ತು ಹತ್ಯೆಯನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರ ಕೂಡಲೇ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು. ಆದಷ್ಟು ಬೇಗ ಕೊಲೆ ಮಾಡಿದ ಆರೋಪಿಗಳ  ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಂಡು ಕಠಿಣ ಶಿಕ್ಷೆ ನೀಡಬೇಕು. ಜುಬೈರ್ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು. ನಿರಂತರವಾಗಿ ನಡೆಯುತ್ತಿರುವ ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಎನ್‍ಐಎಗೆ ವಹಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಬ್ದಲ್‍ಸಲಾಂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹವೀಲ್, ಹುಮಾಯುನ್‍ಪಾಷ, ಜಿಲ್ಲಾ ಉಸ್ತುವಾರಿ ಚಾಂದ್ ಪಾಷ, ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: