ಕರ್ನಾಟಕ

ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆಗೆ ನಿತೀನ್ ಶೆಟ್ಟಿ ಸಲಹೆ

ಮಡಿಕೇರಿ,ಅ.12-ಉತ್ತರ ಪ್ರದೇಶ ವಿಧಾನಸಭಾ ಚುಣಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲು ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆಯೇ ಕಾರಣವಾಗಿದ್ದು, ಕರ್ನಾಟಕದಲ್ಲೂ ಈ ತಂತ್ರವನ್ನು ಬಳಸಿಕೊಳ್ಳಬೇಕೆಂದು ಬಿಜೆಪಿ ಸಾಮಾಜಿಕ ಜಾಲತಾಣದ ವಿಭಾಗ ಪ್ರಭಾರಿ ನಿತೀನ್ ಶೆಟ್ಟಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ನಗರದ ಬಾಲಭಾವನದಲ್ಲಿ ನಡೆದ ಕೊಡಗು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುವುದರ ಜತೆಗೆ ಸಾಮಾಜಿಕ ಜಾಲತಾಣಗಳ ಮೂಲಕ ಯುವ ಮತದಾರರನ್ನು ಸೆಳೆಯುವಂತೆ ಕರೆ ನೀಡಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳ ಜೊತೆಗೆ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕೆಂದರು.

ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷರಾದ ಭಾರತೀಶ್, ಸಾಮಾಜಿಕ ಜಾಲತಾಣ ಪ್ರಕೋಷ್ಠಾದ ಜಿಲ್ಲಾ ಸಂಚಾಲಕರಾದ ಕಾಳಚಂಡ ಅಪ್ಪಣ್ಣ, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಕಾಳನ ರವಿ, ನಗರಸಭಾ ಸದಸ್ಯರಾದ ಅನಿತಾ ಪೂವಯ್ಯ, ಸವಿತಾ ರಾಕೇಶ್, ಸಹಸಂಚಾಲಕರಾದ ಪೊನ್ನಪ್ಪ, ಯೋಗೇಶ್ ನಾಯ್ಡು, ವಿಜಯ್, ನವೀನ್, ರಜಿತ್, ದಿವಿನ್ ಹಾಗೂ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು. ಭಾರತೀ ರಮೇಶ್ ಪ್ರಾರ್ಥಿಸಿದರು, ಮೀನಾ ಪ್ರವೀಣ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. (ವರದಿ-ಕೆಸಿಐ, ಎಂ.ಎನ್)

Leave a Reply

comments

Related Articles

error: