ಕರ್ನಾಟಕಪ್ರಮುಖ ಸುದ್ದಿಮೈಸೂರು

ನ.15-16 : ಮೈಸೂರಿನಲ್ಲಿ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ

ಬೆಂಗಳೂರು, ಪ್ರಮುಖ ಸುದ್ದಿ (ಅ.12 ): ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪ್ರಪ್ರಥಮವಾಗಿ ಕನ್ನಡ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನವನ್ನು ಮೈಸೂರಿನ ಬಿ.ಎನ್. ರಸ್ತೆಯಲ್ಲಿರುವ ಜೆ.ಎಸ್.ಎಸ್. ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಸಹಯೋಗದೊಂದಿಗೆ ಮೈಸೂರಿನಲ್ಲಿ 2017ರ ನವೆಂಬರ್ 15 & 16 ರಂದು “ವಿಜ್ಞಾನ, ತಂತ್ರಜ್ಞಾನ ಮತ್ತು ಸಮಾಜ” ಎಂಬ ಕೇಂದ್ರ ವಿಷಯದ ಮೇಲೆ ಆಯೋಜಿಸುತ್ತಿದೆ.

ಸಮ್ಮೇಳನಕ್ಕೆ ಪ್ರತಿನಿಧಿಗಳಾಗಿ, ರಾಜ್ಯದ ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳ ವಿಜ್ಞಾನ ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರಾಧ್ಯಾಪಕರು, ಸಂಶೋಧಕರು, ವಿಜ್ಞಾನಿಗಳು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡಂತೆ 600 ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು.

ಈ ಸಮ್ಮೇಳನದ ತಾಂತ್ರಿಕ ಅಧಿವೇಶನದಲ್ಲಿ ಕೇಂದ್ರ ವಿಷಯಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ವಿದ್ವತ್‍ಪೂರ್ಣ ಉಪನ್ಯಾಸಗಳನ್ನು ಕನ್ನಡದಲ್ಲಿ ಹೆಸರಾಂತ ವೈಜ್ಞಾನಿಕ ಸಂಸ್ಥೆಗಳ ವಿಶೇಷ ಪರಿಣಿತ ಸಂಪನ್ಮೂಲ ತಜ್ಞರಿಂದ ಆಯೋಜಿಸಲಾಗುವುದು.

ಮೂಲ ಮತ್ತು ಅನ್ವಯಿಕ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಶೋಧನಾ ಪ್ರಾತ್ಯಕ್ಷಿಕೆಗಳನ್ನು ಕನ್ನಡದಲ್ಲಿ ಮಂಡಿಸಲು ಸಹ ಸಮ್ಮೇಳನದಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ. ತಜ್ಞ ಸಮಿತಿಯು ಆಯ್ಕೆ ಮಾಡಿದ ಅತ್ಯುತ್ತಮವಾದ 3 ಪ್ರಾತ್ಯಕ್ಷಿಕೆಗಳಿಗೆ ಬಹುಮಾನವನ್ನು ನೀಡಲಾಗುವುದು.

ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ಭಾಗವಹಿಸಲು ಹಾಗೂ ಸಂಶೋಧನಾ ಪ್ರಾತ್ಯಕ್ಷಿಕೆಗಳ ಸಾರಾಂಶವನ್ನು ಕಳುಹಿಸಲು 4ನೇ ನವೆಂಬರ್ 2017 ರಂದು ಕೊನೆಯ ದಿನವಾಗಿದ್ದು, ಇಮೇಲ್ ಮೂಲಕ [email protected] ನಿಗದಿತ ನಮೂನೆಯಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ : ಡಾ. ಎ. ಎಂ. ರಮೇಶ್, ಹಿರಿಯ ವೈಜ್ಞಾನಿಕ ಅಧಿಕಾರಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮೊಬೈಲ್ : 9845258894 ಇವರನ್ನು ಸಂಪರ್ಕಿಸಬಹುದಾಗಿದೆ.

(ಎನ್‍ಬಿಎನ್‍)

Leave a Reply

comments

Related Articles

error: