ಮೈಸೂರು

ಅ.24-25ರಂದು ಬೃಹತ್ ಪ್ರತಿಭಟನೆ; 12 ಬೇಡಿಕೆಗಳ ಈಡೇರಿಕೆಗೆ ಒತ್ತಾಯ : ಮೀನಾಕ್ಷಿ ಸುಂದರಂ

ಮೈಸೂರು,ಅ.13:- ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಬೇಕು ಹಾಗೂ ಭರವಸೆಗಳ ಈಡೇರಿಕೆಗೆ ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್  ಅ.24-25ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿಮೀನಾಕ್ಷಿ ಸುಂದರಂ ತಿಳಿಸಿದರು.

ಮೈಸೂರಿನ ಆರ್ ಟಿಟಿಸಿ ಸಭಾಂಗಣದಲ್ಲಿ ನಡೆದ ರಾಜ್ಯ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನಗರದಲ್ಲಿ ಸಾರ್ವಜನಿಕರ ಪಡಿತರ ವ್ಯವಸ್ಥೆಯನ್ನು ಸಾರ್ವತ್ರೀಕರಣಗೊಳಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ತಡೆ ಹಾಕಬೇಕು. ಕಾಳಸಂತೆ ವ್ಯಾಪಾರವನ್ನು ನಿಷೇಧಿಸಬೇಕು. ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಲು ಹೊಸ  ಉದ್ಯೋಗ ಸೃಷ್ಟಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ದೇಶದ ಲ್ಲಾ ಕಾರ್ಮಿಕರಿಗೂ ಸಾಮಾಜಿಕ ಭದ್ರತೆ ಒದಗಿಸಬೇಕು. ಎಲ್ಲಾ ಕಾರ್ಮಿಕರಿಗೂ ಕನಿಷ್ಠ 18,000ವೇತನ ನಿಗದಿಪಡಿಸಬೇಕು. ಎಲ್ಲಾ ದುಡಿವ ಜನರಿಗೆ ಕನಿಷ್ಠ 3000ರೂ.ಗೆ ಕಡಿಮೆಯಿಲ್ಲದಂತೆ ಪಿಂಚಣಿ ನೀಡಬೇಕು. ಕಾರ್ಮಿಕ ಕಾನೂನುಗಳ ತಿದ್ದುಪಡಿ ಬೇಡ ಸೇರಿದಂತೆ ಒಟ್ಟು 12 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು. ಈ ಕುರಿತು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.

ವೇದಿಕೆಯಲ್ಲಿ,  ರಾಜ್ಯ ಸಮಿತಿ ಉಪಾಧ್ಯಕ್ಷ ಕೆ.ಶಂಕರ್, ಮೈಸೂರು ಉಸ್ತುವಾರಿ ಕೆ.ಎನ್,ಉಮೇಶ್, ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಜಯರಾಂ, ರಾಜ್ಯಕಾರ್ಯದರ್ಶಿ ಹೆಚ್.ಎಸ್.ಸುನಂದ ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: