ಮೈಸೂರು

ಮನೆಗಳಿಗೆ ನುಗ್ಗಿದ ಮಳೆ ನೀರು; ಕನಕಗಿರಿ ಬಡಾವಣೆ ನಿವಾಸಿಗಳಿಂದ ಪ್ರತಿಭಟನೆ

ಮೈಸೂರು,ಅ.13-ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡಿದ್ದಾರೆ. ಅದೇ ರೀತಿ ಕನಕಗಿರಿ ಬಡಾವಣೆಗೂ ಮಳೆ ನೀರು ನುಗ್ಗಿ ಅಲ್ಲಿನ ನಿವಾಸಿಗಳು ಪರದಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ನಿವಾಸಿಗಳು ಶುಕ್ರವಾರ ನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಎಲೆತೋಟದ ಬಳಿಯಿರುವ ಕನಕಗಿರಿ ಬಡಾವಣೆಯ ಮನೆಗಳಿಗೆ ಮಳೆ ಬಂದಾಗಲೆಲ್ಲಾ ನೀರು ನುಗಿ ತೊಂದರೆಯಾಗುತ್ತದೆ. ಇದಕ್ಕೆ ಬಡಾವಣೆಯ ಸಮೀಪದಲ್ಲೇ ತಲೆ ಎತ್ತಿರುವ ಖಾಸಗಿ ಬಡಾವಣೆ ಕಾರಣವಾಗಿದೆ. ಖಾಸಗಿ ಬಡಾವಣೆ ನಿರ್ಮಾಣಕ್ಕಾಗಿ ರಾಜಕಾಲುವೆ ಒತ್ತುವರಿ ಮಾಡಿಕೊಳ್ಳಲಾಗಿದೆ. ಇದರಿಂದ ಮಳೆ ನೀರು ಸರಾಗವಾಗಿ ಹರಿದುಹೋಗಲು ಸಾಧ್ಯವಾಗದೇ ಜನವಸತಿ ಪ್ರದೇಶಕ್ಕೆ ನುಗ್ಗುತ್ತದೆ ಎಂದು ಪ್ರತಿಭಟನಕಾರರು ಆರೋಪಿಸಿ ಖಾಸಗಿ ಬಡಾವಣೆಗೆ ಹೊಂದಿಕೊಂಡಿರುವ ಕಾಂಪೌಂಡ್ ನ ಗೋಡೆ ಕೆಡವಲು ಮುಂದಾದರು. ಇದರಿಂದ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: