ಪ್ರಮುಖ ಸುದ್ದಿ

ಗ್ರಾಮೀಣ ಪ್ರದೇಶಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಹೆಚ್ಚಿನ ಆದ್ಯತೆ: ಅಶ್ವಿನ್‌ಕುಮಾರ್

ಪ್ರಮುಖ ಸುದ್ದಿ, ತಿ.ನರಸೀಪುರ, ಅ.೧೩: ಗ್ರಾಮೀಣ ಪ್ರದೇಶಗಳಿಗೆ ಮೂಲ ಸೌಕರ್ಯ ಕಲ್ಪಿಸಿಕೊಡಲು ಹಾಗೂ ಶೈಕ್ಷಣಿಕ ಕಟ್ಟಡಗಳ ಅಭಿವೃದ್ಧಿಗೆ ಜಿ.ಪಂ ಅನುದಾನದಲ್ಲಿ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ ಎಂದು ಸೋಮನಾಥಪುರ ಜಿ.ಪಂ ಕ್ಷೇತ್ರದ ಸದಸ್ಯ ಎಂ.ಅಶ್ವಿನ್‌ಕುಮಾರ್ ಹೇಳಿದರು.
ತಾಲೂಕಿನ ಕುರುಬರಹುಂಡಿ ಗ್ರಾಮದಲ್ಲಿ ಶುಕ್ರವಾರ ಉರ್ದು ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ವಾರ್ಷಿಕವಾಗಿ ಜಿ.ಪಂ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ನೀಡುವ ಅನುದಾನವನ್ನು ಗ್ರಾಮೀಣ ಪ್ರದೇಶಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಮತ್ತು ಅಂಗನವಾಡಿ ಕೇಂದ್ರ ಕಟ್ಟಡಗಳ ನಿರ್ಮಾಣ ಹಾಗೂ ಶಾಲಾ ಕಟ್ಟಡಗಳ ದುರಸ್ಥಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂದರು.
ಮುಸ್ಲೀಂ ಸಮುದಾಯವಿರುವ ಕುರುಬರಹುಂಡಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರಕ್ಕೆ ಕಟ್ಟಡ ಬೇಕೆಂಬ ಹಲವು ವರ್ಷಗಳ ಬೇಡಿಕೆಯನ್ನು ಜಿ.ಪಂ ಅನುದಾನ ನೀಡುವ ಮೂಲಕ ಈಡೇರಿಸಲಾಗಿದೆ. ಜನರು ನೀಡಿರುವ ಸಣ್ಣದೊಂದು ಅಧಿಕಾರದಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿzನೆ. ತಿ.ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದ ಜನರು ರಾಜಕೀಯವಾಗಿ ಕೈ ಹಿಡಿದರೆ ಜನರ ಕಷ್ಟಸುಖಗಳಿಗೆ ಸ್ಪಂದಿಸುವ ಮೂಲಕ ಸಾಮಾಜಿಕ ಸೇವೆ ಮುಂದುವರೆಸುತ್ತೇನೆ ಎಂದು ತಿಳಿಸಿದರು.
ಜೆಡಿಎಸ್ ಹಿರಿಯ ಮುಖಂಡ ಹಾಗೂ ಜಿ.ಪಂ ಮಾಜಿ ಸದಸ್ಯ ಎಸ್.ಆರ್.ವರದರಾಜು, ಗ್ರಾ.ಪಂ ಅಧ್ಯಕ್ಷೆ ಪುಟ್ಟಸಿದ್ದಮ್ಮ, ಉಪಾಧ್ಯಕ್ಷೆ ಸುಜಾತ ಕೃಷ್ಣಮೂರ್ತಿ, ಸದಸ್ಯರಾದ ಪ್ರೀತಂ, ಮಂಜೇಶ್‌ಗೌಡ, ಸುರೇಶ, ಗೋಪಾಲ್, ಹರೀಶ, ಸುವರ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವಯ್ಯ, ಮಾಜಿ ಅಧ್ಯಕ್ಷ ಪುಟ್ಟಸ್ವಾಮಿ, ಮುಖಂಡರಾದ ರಾಮಾನುಜಂ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: